ಉಡುಪಿಯಲ್ಲಿ ಭಾರಿ ಮಳೆ; ಶಾಲಾ-ಕಾಲೇಜುಗಳಿಗೆ ರಜೆ
ಉಡುಪಿ ಮತ್ತು ಮಂಗಳೂರಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ಶುಕ್ರವಾರ ಮತ್ತು ಶನಿವಾರ ರಜೆ ಘೋಷಿಸಲಾಗಿದೆ.
ಉಡುಪಿ: ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಶುಕ್ರವಾರ ಮತ್ತು ಶನಿವಾರ ಉಡುಪಿ ಮತ್ತು ಮಂಗಳೂರಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಉಡುಪಿ, ಕುಂದಾಪುರ, ಕಾರ್ಕಳ, ಬೈಂದೂರು, ಕಾಪು, ಸುಳ್ಯ, ಪುತ್ತೂರು, ಬೆಳ್ತಂಗಡಿಗಳಲ್ಲಿ ಗುರುವಾರ ರಾತ್ರಿಯಿಂದಲೇ ಜಿಟಿ ಮಳೆ ಸುರಿಯುತ್ತಿರುವ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ, ಸಾಗರದ ಮಿನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದ್ದು, ವಾಹನ ಸಂಚಾರಕ್ಕೆ ತಡೆಯಾಗಿದೆ. ಅಲ್ಲದೆ, ಬೆಂಗಳೂರಿನಲ್ಲೂ ಸಹ ಮೋಡ ಕವಿದ ವಾತಾವರಣವಿದ್ದು, 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.