ರಾಜ್ಯಾದ್ಯಂತ ಜುಲೈ 21ರಂದು ಶಾಲಾ, ಕಾಲೇಜು ಬಂದ್
ವಿದ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ಬಂದ್ ನಡೆಸಲು ಉದ್ದೇಶಿಸಿದ್ದು, ಎಲ್ಲರೂ ಬಂದ್`ಗೆ ಸಹಕರಿಸಬೇಕಾಗಿ ವಿದ್ಯಾರ್ಥಿ ಸಂಘಟನೆಗಳು ಕೋರಿವೆ.
ಬೆಂಗಳೂರು: ರಾಜ್ಯಸರ್ಕಾರ ವಿಧ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯನ್ನು ಕೈಬಿಟ್ಟ ಹಿನ್ನೆಲೆಯಲ್ಲಿ ಜುಲೈ 21ರಂದು ರಾಜ್ಯಾದ್ಯಂತ ಎಲ್ಲಾ ಶಾಲಾ, ಕಾಲೇಜುಗಳಿಗೆ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿವೆ.
ವಿದ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ಬಂದ್ ನಡೆಸಲು ಉದ್ದೇಶಿಸಿದ್ದು, ಎಲ್ಲರೂ ಬಂದ್'ಗೆ ಸಹಕರಿಸಬೇಕಾಗಿ ವಿದ್ಯಾರ್ಥಿ ಸಂಘಟನೆಗಳು ಕೋರಿವೆ.
ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್'ಪಾಸ್ ನೀಡುವುದಾಗಿ ಘೋಷಿಸಿತ್ತು. ಆದರೆ ರೈತರ ಸಾಲ ಮನ್ನಾ ಮಾಡುವುದಕ್ಕಾಗಿ, ವಿದ್ಯಾರ್ಥಿಗಳಿಗೆ ಘೋಷಿಸಿದ್ದ ಉಚಿತ ಬಸ್ ಪಾಸ್ ಸೌಲಭ್ಯ ಪ್ರಸ್ತಾಪವನ್ನು ಸರ್ಕಾರ ಕೈಬಿಟ್ಟಿದೆ.