ಬೆಂಗಳೂರು: ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದ ಸೇರ್ಪಡೆ ಶಿಫಾರಸ್ಸು ವಿಳಂಬ ಖಂಡಿಸಿ ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡರು. ಕೆಪಿಸಿಸಿ ಕಚೇರಿಯಿಂದ ಪಾದಯಾತ್ರೆ ಮೂಲಕ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಷ್ಪ್ರಸ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡರು.


COMMERCIAL BREAK
SCROLL TO CONTINUE READING

ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್, ಪರಿಷತ್ ವಿಪಕ್ಷ ನಾಯಕ ಬಿ.ಕೆ‌ ಹರಿಪ್ರಸಾದ್ ಭಾಗಿಯಾಗಿದ್ದರು.


ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ವಿರೋಧ ಪಕ್ಷದ ನಾಯಕ  ಸಿದ್ದರಾಮಯ್ಯ ಮಾತನಾಡಿ, ಎಸ್ ಟಿ ಎಸ್ ಸಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರಿಸಲು ಇಷ್ಟು ದಿನ ಏನು ಮಾಡುತ್ತಿದ್ದರು?  ಮೀಸಲಾತಿ ಹೆಚ್ಚಳಕ್ಕೆ ಆದೇಶ ಯಾವಾಗ ಆಯಿತು? ಆದೇಶ ಆಗಿ ಬಹಳ ದಿನ ಆಯ್ತು, ನಂತರದಲ್ಲಿ ಕ್ಯಾಬಿನೆಟ್ ನಲ್ಲೂ ನಿರ್ಧಾರ ಆಯಿತು ಎಂದರು.


ಇದನ್ನೂ ಓದಿ: Transport Employees Strike : ಇಂದು ಸಾರಿಗೆ ನೌಕರರ ಮುಷ್ಕರವಿಲ್ಲ : ಕರ್ನಾಟಕ ಹೈಕೋರ್ಟ್ ತಡೆ


ನಾವು ಪ್ರತಿಭಟನೆಗೆ ಕರೆ ಕೊಟ್ಟ ಬಳಿಕ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. 50% ಇರುವ ಮೀಸಲಾತಿ ಏರಿಕೆ ಮಾಡುವ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸರ್ಕಾರ ಉತ್ತರ ಕೊಟ್ಟಿದೆ. ಅಂದರೆ ಏನು ಅರ್ಥ? ರಾಜ್ಯ ಸರ್ಕಾರದ ಮೀಸಲಾತಿ ಹೆಚ್ಚಳ ಮಾಡಿದರೂ ಕೇಂದ್ರ ಒಪ್ಪಲ್ಲ ಎಂದಲ್ಲವೇ ಎಂದು ಪ್ರಶ್ನಿಸಿದರು.


ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ 50% ಮೀರಬಾರದು ಎಂದಿದೆ. ಅದು ಮೀರಬೇಕಾದರೆ ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು. ಕೇವಲ ಮತಕ್ಕಾಗಿ ಹಾಗೂ ಜನರ ದಾರಿತಪ್ಪಿಸಲು ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.


ಇದನ್ನೂ ಓದಿ: Chamarajanagar : ನೀರಿನಲ್ಲಿ ಮುಳುಗುತ್ತಿದ್ದ ಮರಿ ಆನೆ ಕೊನೆಗೂ ತಾಯಿ ಮಡಿಲಿಗೆ!


ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ,  ದಲಿತರಿಗೆ ಎಷ್ಟು ಮೋಸ ಮಾಡುತ್ತಿದ್ದೀರಿ? ಬಿಜೆಪಿ ಸರ್ಕಾರ ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿ ಸರ್ಕಾರ 15 ದಿನ ಮಾತ್ರ ಇದೆ. ಅಷ್ಟು ದಿನ ಕೂಡಾ ಇರಬಾರದು. ಕೂಡಲೇ ವಜಾ ಮಾಡಬೇಕು ಎಂದು ಒತ್ತಾಯಿಸಿ, ರಾಜ ಭವನ ಚಲೋ ಹಮ್ಮಿಕೊಂಡಿದ್ದೇವೆ. ಬಿಜೆಪಿ ಸರ್ಕಾರ ದಲಿತರಿಗೆ ಅವಮಾನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.