ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮಾ ನಿಧನ
ಡಾ. ಬಿ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ, ಡಾ. ಹೇಮಾವತಿ ಹೆಗ್ಗಡೆಯವರ ಸಹೋದರ. ಬೆಳ್ತಂಗಡಿ ತಾಲೂಕಿನ ಪೆರಾಡಿ ಬೀಡು ನಿವಾಸಿಯಾದ ಇವರು, ಮೂಡುಬಿದಿರೆ ಜೈನ್ ಹೈಸ್ಕೂಲಿನ `ಕನ್ನಡ ಪಂಡಿತ`ರೆಂದೇ ಚಿರಪರಿಚಿತರಾಗಿದ್ದ ದಿವಂಗತ ಟಿ. ರಘು ಚಂದ್ರ ಶೆಟ್ಟಿ ಅವರ ಮಗ. ಮೃತರು ಪತ್ನಿ, ಇಬ್ಬರು ಪುತ್ರರು, ಬಂಧುವರ್ಗ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ದಕ್ಷಿಣ ಕನ್ನಡ: ಬೆಳ್ತಂಗಡಿ ತಾಲೂಕಿನ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ದೀರ್ಘಕಾಲ ಪ್ರಾಂಶುಪಾಲರಾಗಿದ್ದ, ಪ್ರಸ್ತುತ ಎಸ್‌ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದ ಡಾ. ಬಿ.ಯಶೋವರ್ಮಾ ಅವರು ಅನಾರೋಗ್ಯದಿಂದ ಇಂದು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿನಿಂದ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಇದನ್ನು ಓದಿ: Health Tips: ಎಚ್ಚರ! ನೀವು ಸೇವಿಸುವ ಈ ಆಹಾರಗಳು ಕುರುಡುತನ ತರಬಹುದು!
ಡಾ. ಬಿ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ, ಡಾ. ಹೇಮಾವತಿ ಹೆಗ್ಗಡೆಯವರ ಸಹೋದರ. ಬೆಳ್ತಂಗಡಿ ತಾಲೂಕಿನ ಪೆರಾಡಿ ಬೀಡು ನಿವಾಸಿಯಾದ ಇವರು, ಮೂಡುಬಿದಿರೆ ಜೈನ್ ಹೈಸ್ಕೂಲಿನ 'ಕನ್ನಡ ಪಂಡಿತ'ರೆಂದೇ ಚಿರಪರಿಚಿತರಾಗಿದ್ದ ದಿವಂಗತ ಟಿ. ರಘು ಚಂದ್ರ ಶೆಟ್ಟಿ ಅವರ ಮಗ. ಮೃತರು ಪತ್ನಿ, ಇಬ್ಬರು ಪುತ್ರರು, ಬಂಧುವರ್ಗ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಸಸ್ಯಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಯಶೋವರ್ಮಾರವರು, ಧಾರವಾಡದಲ್ಲಿ ಜೆಎಸ್‌ಎಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಬಳಿಕ ಉಜಿರೆಯ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು. ನಿವೃತ್ತರಾದ ಬಳಿಕ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾಗಿ, ಶಿಸ್ತಿಗೆ ಮತ್ತೊಂದು ಹೆಸರು ಎಂಬಂತೆ ಬದುಕಿದ್ದ ಡಾ. ಬಿ ಯಶೋವರ್ಮ ಇಂದು ಅಸುನೀಗಿದ್ದಾರೆ.
ಎಸ್‌ಡಿಎಂಇ ಸೊಸೈಟಿಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಎಲ್ಲರೂ ಪ್ರೀತಿಸುವ ಮತ್ತು ಗೌರವಿಸುವ ವ್ಯಕ್ತಿ. 1986ರಲ್ಲಿ ಸೈಕಾಲಜಿಯಲ್ಲಿ ಪಿಎಚ್ ಡಿ ಪದವಿ ಪಡೆದಿದ್ದ ಯಶೋವರ್ಮಾರವರು ಸಸ್ಯಶಾಸ್ತ್ರದ ವಿಷಯದಲ್ಲಿ ತೀವ್ರ ಉತ್ಸಾಹಿಯಾಗಿದ್ದರು. ಯಶೋವರ್ಮಾ ಅವರ ಹೆಸರಿನಲ್ಲಿ ಅನೇಕ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರಕಟಣೆಗಳು ಹೊರ ಬಂದಿವೆ. ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಹಲವಾರು ಸಮ್ಮೇಳನಗಳನ್ನು ಕೂಡ ನಡೆಸಿದ್ದರು.
ಮಂಗಳೂರು ವಿಶ್ವವಿದ್ಯಾನಿಲಯ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಸೇರಿದಂತೆ ಹಲವಾರು ಹುದ್ದೆಗಳ ಮೂಲಕ ಸೇವೆ ಸಲ್ಲಿಸಿದ್ದ ಕೀರ್ತಿ ಯಶೋವರ್ಮಾರಿಗೆ ಸಲ್ಲುತ್ತದೆ. ಎಸ್‌ಡಿಎಂಸಿ ಉಜಿರೆಯ ಪ್ರಾಂಶುಪಾಲರಾಗಿದ್ದ ಅವಧಿಯಲ್ಲಿ ಕಾಲೇಜು ನ್ಯಾಕ್‌ನಿಂದ ಸತತ ಮೂರು ಬಾರಿ ‘ಎ’ ದರ್ಜೆಯ ಮಾನ್ಯತೆ ಪಡೆದಿತ್ತು.
ಡಾ. ಬಿ ಯಶೋವರ್ಮ ಅವರು ಎಸ್‌ಡಿಎಂಸಿ ಉಜಿರೆಯನ್ನು ಹೊಂದಿದ್ದಂತೆಯೇ ಎಸ್‌ಡಿಎಂಇ ಸೊಸೈಟಿಯಿಂದ ನಿರ್ವಹಿಸಲ್ಪಡುವ 56 ಸಂಸ್ಥೆಗಳ ಮುಖ್ಯಸ್ಥರಾಗಿದ್ದರು. ಅವರ ಮಾರ್ಗದರ್ಶನದಲ್ಲಿ ಸಂಸ್ಥೆಗಳು UGC ಮತ್ತು NAAC ಮಾನ್ಯತೆಗಳು, ಗಿನ್ನೆಸ್ ದಾಖಲೆಗಳು, ದಾಖಲೆ ನಿಯೋಜನೆಗಳು, ಅಭೂತಪೂರ್ವ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಸಂಶೋಧನೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ಒಳಗೊಂಡಂತೆ ಸಾಧನೆಗಳನ್ನು ಕಂಡಿವೆ.
ನಳಿನ್‍ಕುಮಾರ್ ಕಟೀಲು ಸಂತಾಪ:
ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಡಾ.ಯಶೋವರ್ಮ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲು ತೀವ್ರ ಸಂತಾಪ ಸೂಚಿಸಿದ್ದಾರೆ. ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಚಾರ್ಯರಾಗಿ ಹಲವು ವರ್ಷ ಅವರು ಸೇವೆ ಸಲ್ಲಿಸಿದ್ದರು. ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಹಲವಾರು ಸಮ್ಮೇಳನಗಳನ್ನು ನಡೆಸಿದ್ದರು ಎಂದು ತಿಳಿಸಿದ್ದಾರೆ. "ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ. ದುಃಖತಪ್ತ ಕುಟುಂಬ, ಶಿಷ್ಯರು ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ" ಎಂದು ಅವರು ಪ್ರಾರ್ಥಿಸಿದ್ದಾರೆ.
ಇದನ್ನು ಓದಿ: ತಲೆಗೆ ಪಿಸ್ತೂಲ್ ಇಟ್ಟು ಬಾಡಿಗೆಗಿದ್ದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ಮನೆ ಮಾಲೀಕ ಅರೆಸ್ಟ್
ಸಂತಾಪ ಸೂಚಿಸಿದ ಶೋಭಾ ಕರಂದ್ಲಾಜೆ:
"ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು, ದಕ್ಷ ಆಡಳಿತಗಾರ, ಆತ್ಮೀಯರಾದ ಡಾ.ಯಶೋವರ್ಮ ಅವರ ನಿಧನದ ಸುದ್ದಿ ಅತೀವ ದುಃಖವನ್ನು ತಂದಿದೆ. ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಶ್ರೀ ಮಂಜುನಾಥ ಸ್ವಾಮಿ ನೀಡಲಿ" ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಇನ್ನು ಡಾ. ಯಶೋವರ್ಮ ಅವರ ಮೃತದೇಹವನ್ನು ಆದಷ್ಟು ಬೇಗ ಸ್ವದೇಶಕ್ಕೆ ಕರೆದುಕೊಂಡು ಬರುವ ನಿಟ್ಟಿನಲ್ಲಿ, ಈಗಾಗಲೇ ಕೇಂದ್ರ ವಿದೇಶಾಂಗ ಸಚಿವರ ಕಾರ್ಯಾಲಯ ಹಾಗೂ ಸಿಂಗಾಪುರ ಹೈ ಕಮಿಷನ್ ಅನ್ನು ಸಂಪರ್ಕಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.