ಚಾಮರಾಜನಗರ: ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಮರಾಜನಗರ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದದ್ಯಾಂತ ಬಿಜೆಪಿ ಬಾವುಟ, ಫ್ಲೆಕ್ಸ್ ಗಳು ರಾರಾಜಿಸುತ್ತಿದ್ದು ನಗರಸಭೆ ವಿರುದ್ಧ ಇತರೆ ಪಕ್ಷಗಳು ತಿರುಗಿಬಿದ್ದಿವೆ.


COMMERCIAL BREAK
SCROLL TO CONTINUE READING

ಈ ಹಿಂದೆ ಜಯಂತಿಗಳಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಕಲಾಗಿದ್ದ ಅಭಿನಂದನಾ ಕಟೌಟ್ ಗಳನ್ನು ಚಾಮರಾಜನಗರ ನಗರಸಭೆ ತೆರವು ಮಾಡಿತ್ತು. ಆದರೀಗ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಕ್ಕೆ ಹಾಕಿರುವ ಫ್ಲೆಕ್ಸ್ ಗಳ ಬಗ್ಗೆ ಜಾಣ ಕುರುಡು ಪ್ರದರ್ಶನ ತೋರುತ್ತಿರುವ ನಗರಸಭೆ ಅಧಿಕಾರಿಗಳ ವಿರುದ್ಧ ಎಸ್ಡಿಪಿಐ, ಬಿಎಸ್ಪಿ ಜಂಟಿಯಾಗಿ ಪ್ರತಿಭಟಿಸಿ ಆಕ್ರೋಶ ಹೊರಹಾಕಿದೆ.


ಇದನ್ನೂ ಓದಿ- Students appeal to CM Bommai: “ಸಿಎಂ ಅಂಕಲ್… ಬಸ್ ವ್ಯವಸ್ಥೆ ಮಾಡದಿದ್ದರೆ ಶಾಲೆಗೆ ಹೋಗಲ್ಲ”


ಜಿಲ್ಲಾಡಳಿತ ಹಾಗೂ ನಗರಸಭೆಯು ಆಡಳಿತ ಪಕ್ಷಕ್ಕೊಂದು ನ್ಯಾಯ, ವಿಪಕ್ಷಗಳಿಗೊಂದು ನ್ಯಾಯ ಎಂಬಂತೆ ವರ್ತಿಸುತ್ತಿದ್ದು ಕೂಡಲೇ ಬಿಜೆಪಿಯವರು ಹಾಕಿರುವ ಫ್ಲೆಕ್ಸ್ ಗಳನ್ನು ತೆರವು ಮಾಡಬೇಕು. ಒಂದು ವೇಳೆ ನಗರಸಭೆ ಸಿಬ್ಬಂದಿ ತೆರವುಗೊಳಿಸದಿದ್ದರೇ ನಾವೇ ಫ್ಲೆಕ್ಸ್ ಗಳನ್ನು ತೆಗೆಯುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ- ಮಕ್ಕಳಿಂದಲೇ ತಂದೆಯ ಕೊಲೆಗೆ ಸುಪಾರಿ.! ಬಯಲಾಯಿತು ಕೊಲೆಯ ಹಿಂದಿನ ರೋಚಕ ಕತೆ


ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಆಗಮನದ ಹಿನ್ನೆಲೆಯಲ್ಲಿ ರಸ್ತೆಯುದ್ದಕ್ಕೂ ಬಿಜೆಪಿ ಬಾವುಟಗಳು, ಫ್ಲೆಕ್ಸ್ ಗಳನ್ನು ಅಳವಡಿಸಿರುವುದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದ್ದು ನಗರಸಭೆ ಮುಂದಿನ ನಡೆ ಕಾದು ನೋಡಬೇಕಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.