ಬೆಂಗಳೂರು: 2017-2018ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಆರಂಭಗೊಂಡಿದೆ. ಮಾರ್ಚ್ 1 ರಿಂದ 17ರವರೆಗೆ ಪರೀಕ್ಷೆಗಳು ನಡೆಯಲಿದ್ದು, ನಕಲು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಮಾಸ್ಟರ್ ಪ್ಲಾನ್ ಮಾಡಲಾಗಿದೆ. ಮೊದಲ ಬಾರಿಗೆ ಪರೀಕ್ಷಾ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಮಾಡಲಾಗಿದೆ. 


COMMERCIAL BREAK
SCROLL TO CONTINUE READING

ಎಕ್ಸಾಮ್ ಸೆಕ್ಯೂರ್ ಸಿಸ್ಟಮ್ ನಡಿ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದ್ದು, ಜಿಲ್ಲಾವಾರು ಡಿಸಿ ಮತ್ತು ಡಿಡಿಪಿಐ ನೇತೃತ್ವದಲ್ಲಿ ಪರೀಕ್ಷೆಗಳು ನಡೆಯಲಿದೆ ಎಂದು ಪಿಯು ಬೋರ್ಡ್ ತಿಳಿಸಿದೆ. ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜಾಗೃತಿ ದಳ ನೇಮಕ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೋಮ್ ಗಾರ್ಡ್ಸ್ ಗಳನ್ನು ನಿಯೋಜಿಸಲಾಗಿದೆ. ಪರೀಕ್ಷೆಗಾಗಿ 1,004 ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿರುವ ಪಿಯು ಬೋರ್ಡ್ ಅದಕ್ಕಾಗಿ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕಣ್ಗಾವಲಿಗೆ ಕ್ರಮ ಕೈಗೊಂಡಿದೆ. ಜೊತೆಗೆ ಪರೀಕ್ಷಾ ಮೇಲ್ವಿಚಾರಕರನ್ನು ಹೊರತುಪಡಿಸಿ ಯಾರೂ ಮೊಬೈಲ್ ಬಳವಡಿಸುವಂತಿಲ್ಲ ಎಂದೂ ಸಹ ಸೂಚನೆ ನೀಡಲಾಗಿದೆ. 


3,52.290 ವಿದ್ಯಾರ್ಥಿಗಳು, 3,37,860 ವಿದ್ಯಾರ್ಥಿನಿಯರು ಸೇರಿ ಒಟ್ಟು  6,90,150 ವಿದ್ಯಾರ್ಥಿಗಳು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ.