ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಶುಕ್ರವಾರ(ಮಾರ್ಚ್ 1)ದಿಂದ ಪ್ರಾರಂಭವಾಗಲಿದ್ದು, ಇದಕ್ಕಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಕೈಗೊಂಡಿದೆ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ತಿಳಿಸಿದರು.


COMMERCIAL BREAK
SCROLL TO CONTINUE READING

ಮಾರ್ಚ್ 1 ರಿಂದ 18ರವರೆಗೆ ಪ್ರತಿದಿನ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿರುವ ಪರೀಕ್ಷೆ ನಡೆಯಲಿದೆ. ಈ ಉದ್ದೇಶಕ್ಕಾಗಿ 1013 ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಒಟ್ಟಾರೆ 6,73,606 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಬಾರಿ ಶೇ 75ಕ್ಕಿಂತ ಕಡಿಮೆ ಹಾಜರಾತಿ ಹೊಂದಿರುವ 2,500 ವಿದ್ಯಾರ್ಥಿಗಳು ಪರೀಕ್ಷೆಗೆ ಅನರ್ಹರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳಲು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.


ಕರ್ನಾಟಕ ಸೆಕ್ಯೂರ್‌ ಎಕ್ಸಾಮಿನೇಷನ್‌ ಸಿಸ್ಟಮ್‌' ಯೋಜನೆಯಡಿ ಪರೀಕ್ಷೆಗಳನ್ನು ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಸಲಾಗುವುದು. ಪರೀಕ್ಷಾ ಗೌಪ್ಯ ವಸ್ತುಗಳನ್ನು ಸಾಗಿಸುವ ಎಲ್ಲಾ ವಾಹನಗಳಿಗೂ ಜಿಪಿಎಸ್‌ ಟ್ರ್ಯಾಕಿಂಗ್‌ ಸಿಸ್ಟಮ್‌ ಅಳವಡಿಸಿ ಭದ್ರತೆ ಒದಗಿಸಲಾಗುವುದು ಎಂದು ಉಮಾಶಂಕರ್ ತಿಳಿಸಿದರು.


ಮಾರ್ಚ್‌ 1ರಿಂದ ಪ್ರಾರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಸಂದರ್ಭದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಯಾವುದೇ ಆತಂಕ ಬೇಡ ಎಂದು ಅಭಯ ನೀಡಿರುವ ಸರಕಾರ, ಇಂತಹ ಅಕ್ರಮಗಳಲ್ಲಿ ತೊಡಗುವ ವ್ಯಕ್ತಿಗಳ ವಿರುದ್ಧ ಅಗತ್ಯ ಬಿದ್ದರೆ 'ಕೋಕಾ'ಗಿಂತ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ. 


ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಂತಿದೆ:
ದಿನಾಂಕ  ವಿಷಯ
ಮಾರ್ಚ್ 1 ಅರ್ಥಶಾಸ್ತ್ರ, ಭೌತಶಾಸ್ತ್ರ 
ಮಾರ್ಚ್ 2 ಮಾಹಿತಿ ತಂತ್ರಜ್ಞಾನ, ರೀಟೇಲ್‌, ಆಟೋಮೋಬೈಲ್‌, ಹೆಲ್ತ್‌ ಕೇರ್‌, ಬ್ಯೂಟಿ ಮತ್ತು ವೆಲ್‌ನೆಸ್‌ 
ಮಾರ್ಚ್ 3 ಭಾನುವಾರ (ರಜೆ) 
ಮಾರ್ಚ್ 4 ಮಹಾಶಿವರಾತ್ರಿ (ರಜೆ)
ಮಾರ್ಚ್ 5 ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್‌, ಫ್ರೆಂಚ್‌
ಮಾರ್ಚ್ 6 ತರ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ
ಮಾರ್ಚ್ 7 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ 
ಮಾರ್ಚ್ 8 ಉರ್ದು, ಸಂಸ್ಕೃತ 
ಮಾರ್ಚ್ 9 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ 
ಮಾರ್ಚ್ 10 ಭಾನುವಾರ (ರಜೆ) 
ಮಾರ್ಚ್ 11 ವ್ಯವಹಾರ ಅಧ್ಯಯನ, ಸಮಾಜಶಾಸ್ತ್ರ, ರಸಾಯನಶಾಸ್ತ್ರ 
ಮಾರ್ಚ್ 12 ಭೂಗೋಳಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ 
ಮಾರ್ಚ್ 13 ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್‌, ಗಣಕ ವಿಜ್ಞಾನ 
ಮಾರ್ಚ್ 14 ಇತಿಹಾಸ, ಜೀವಶಾಸ್ತ್ರ, ಬೇಸಿಕ್‌ ಮ್ಯಾಥ್ಸ್‌ 
ಮಾರ್ಚ್ 15 ಹಿಂದಿ 
ಮಾರ್ಚ್ 16 ಕನ್ನಡ 
ಮಾರ್ಚ್ 17 ಭಾನುವಾರ (ರಜೆ) 
ಮಾರ್ಚ್ 18 ಇಂಗ್ಲಿಷ್‌