ಬೆಂಗಳೂರು:  ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ (PUC Result) ನಾಳೆ (ಜುಲೈ 14) ಬೆಳಿಗ್ಗೆ 11:30ಕ್ಕೆ ಪ್ರಕಟವಾಗಲಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ (S Suresh Kumar) ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದೀಗ ನಾಳೆ (ಜುಲೈ 14) ಬೆಳಿಗ್ಗೆ 11:30ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಬಗ್ಗೆ ವಿವರವಾಗಿ ಮಾಹಿತಿ ನೀಡಿರುವ ಸುರೇಶ್ ಕುಮಾರ್ ನಾಳೆ ಬೆಳಿಗ್ಗೆ 11:30ಕ್ಕೆ ವಿದ್ಯಾರ್ಥಿಗಳಿಗೆ ಎಸ್ಎಂಎಸ್ ಮೂಲಕ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.


ಬಳಿಕ ಮಧ್ಯಾಹ್ನ 12 ಗಂಟೆ ನಂತರ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯ ಅಧಿಕೃತ ವೆಬ್ಸೈಟ್ www.karresults.nic.in ನಲ್ಲಿ ಕೂಡ ಫಲಿತಾಂಶ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. 


ಈ ವರ್ಷ ಮಾರ್ಚ್ 4ನೇ ತಾರೀಖಿನಿಂದ ಮಾರ್ಚ್ 21ರವರೆಗೆ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ನಂತರ ಜನತಾ ಕರ್ಫ್ಯೂ ಮತ್ತು ಲಾಕ್‌ಡೌನ್ ಘೋಷಿಸಿದ್ದರಿಂದ 23ನೇ ತಾರೀಖು ನಡೆಯಬೇಕಿದ್ದ ಇಂಗ್ಲಿಷ್ ಪರೀಕ್ಷೆಯೊಂದು ಮಾತ್ರ ಮುಂದೂಡಲ್ಪಟ್ಟಿತ್ತು. ಲಾಕ್‌ಡೌನ್ ತೆರವಿನ ಬಳಿಕ ಕಳೆದ ಜೂನ್ 18ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪರೀಕ್ಷೆ ನಡೆಸಲಾಗಿತ್ತು.