ಇಂದು ಬೆಳಿಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ

ಬೆಳಿಗ್ಗೆ 11 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಫಲಿತಾಂಶದ ವಿವರ ನೀಡಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ. ಶಿಖಾ  

Updated: Apr 15, 2019 , 06:58 AM IST
ಇಂದು ಬೆಳಿಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ
Representational Image

ಬೆಂಗಳೂರು: ಇಂದು ಬೆಳಿಗ್ಗೆ 11 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಿದೆ.  ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ. ಶಿಖಾ ಸುದ್ದಿಗೋಷ್ಠಿಯಲ್ಲಿ ಫಲಿತಾಂಶದ ವಿವರ ನೀಡಲಿದ್ದಾರೆ.

ಫಲಿತಾಂಶವು ಇಲಾಖೆಯ ವೆಬ್ಸೈಟ್ www.puc.kar.nic.in ಮತ್ತು http://karresults.nic.in ನಲ್ಲಿ ಪ್ರಕಟವಾಗಲಿದೆ. ಫಲಿತಾಂಶ ಪ್ರಕಟಗೊಂಡ ನಂತರ ಉತ್ತರ ಪತ್ರಿಕೆಗಳ ನಕಲು ಪ್ರತಿ ಪಡೆಯಲು, ಮರು ಎಣಿಕೆ ಹಾಗೂ ಮರು ಮೌಲ್ಯಮಾಪನಕ್ಕಾಗಿ ಆನ್‌ಲೈನ್‌ನಲ್ಲಿಯೇ ಅರ್ಜಿ ಸಲ್ಲಿಸಬಹುದಾಗಿದೆ.

2019ರ ಮಾರ್ಚ್ 1 ರಿಂದ ಮಾರ್ಚ್ 18 ರ ವರೆಗೆ ನಡೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಒಟ್ಟು 6.73 ಲಕ್ಷ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.