ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಇನ್ನೊಂದು ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸುವ ಸಾಧ್ಯತೆ ಇದೆ. ಎಪ್ರಿಲ್ 29ರಿಂದ ಸಿಇಟಿ ಪರೀಕ್ಷೆ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ.


COMMERCIAL BREAK
SCROLL TO CONTINUE READING

ಈಗಾಗಲೇ ಫಲಿತಾಂಶ ಪ್ರಕಟಗೊಳ್ಳಬೇಕಿತ್ತು. ಆದರೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ವರ್ಗಾವಣೆಗೊಂಡಿರುವ ಕಾರಣ ಫಲಿತಾಂಶ ಪ್ರಕಟಣೆ ವಿಳಂಬವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


2019ರ ಮಾರ್ಚ್ 1 ರಿಂದ ಮಾರ್ಚ್ 18 ರ ವರೆಗೆ ನಡೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಒಟ್ಟು 6.73 ಲಕ್ಷ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಸಾಲಿನಿಂದ ಮೌಲ್ಯಮಾಪಕರು ಅಂಕಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿರುವುದರಿಂದ ಫಲಿತಾಂಶದ ಸಿದ್ಧತೆ ಕೆಲಸ ಪಿಯು ಇಲಾಖೆಗೆ ಸುಲಭವಾಗಲಿದೆ. 


ಫಲಿತಾಂಶವು ಇಲಾಖೆಯ ವೆಬ್ಸೈಟ್ www.puc.kar.nic.in ಮತ್ತು http://karresults.nic.in ನಲ್ಲಿ ಪ್ರಕಟವಾಗಲಿದೆ. ಫಲಿತಾಂಶ ಪ್ರಕಟಗೊಂಡ ನಂತರ ಉತ್ತರ ಪತ್ರಿಕೆಗಳ ನಕಲು ಪ್ರತಿ ಪಡೆಯಲು, ಮರು ಎಣಿಕೆ ಹಾಗೂ ಮರು ಮೌಲ್ಯಮಾಪನಕ್ಕಾಗಿ ಆನ್‌ಲೈನ್‌ನಲ್ಲಿಯೇ ಅರ್ಜಿ ಸಲ್ಲಿಸಬಹುದಾಗಿದೆ.