ಬೆಂಗಳೂರು: ನಾಳೆಯಿಂದ ಅಂದರೆ ಆಗಸ್ಟ್ 12ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಆರಂಭವಾಗಲಿದೆ. ನಾಳೆಯಿಂದ 25-08-2022ರವರೆಗೆ ನಡೆಯಲಿರುವ ಪೂರಕ ಪರೀಕ್ಷೆಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. 


COMMERCIAL BREAK
SCROLL TO CONTINUE READING

ಪದವಿ ಪೂರ್ವ ಶಿಕ್ಷಣ ಇಲಾಖೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಹಿನ್ನೆಲೆಯಲ್ಲಿ  ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಪ್ರತಿ ತಾಲೂಕಿನಲ್ಲಿ ತ್ರಿಸದಸ್ಯ ಸಮಿತಿಯನ್ನು ಸಹ ರಚಿಸಲಾಗಿದೆ.  ಸಮಿತಿಯಲ್ಲಿ ತಹಶೀಲ್ದಾರ್, ಬಿಇಒ ಮತ್ತು ಪ್ರಾಂಶುಪಾಲರು ಇರಲಿದ್ದಾರೆ. ಇದಲ್ಲದೆ, ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ಪ್ರದೇಶ ನಿಷೇಧ ವಿಧಿಸಲಾಗಿದೆ. 


ಇದನ್ನೂ ಓದಿ- ತಣ್ಣಗಾಗದ ಈದ್ಗಾ ಕಿಚ್ಚು: ಮುಸ್ಲಿಂ ಮುಖಂಡರ ಜೊತೆ ಪೊಲೀಸರ ಶಾಂತಿ ಸಭೆ


ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವ ವಾಹನಕ್ಕೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಕೆ ಮಾಡಲಾಗಿದ್ದು, ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಸಾಗಿಸುವ ವಾಹನದೊಂದಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೂಡ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಿಸಲಾಗುವುದು ಎಂದು ಹೇಳಲಾಗಿದೆ. 


ಪರೀಕ್ಷಾ ಕೇಂದ್ರಗಳಿಗೆ ವಿದ್ಯುತ್ ವ್ಯತ್ಯಯ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ವಿದ್ಯಾರ್ಥಿಗಳು ಕೊಂಡೊಯ್ಯಲು ಅವಕಾಶವಿಲ್ಲ. 


ಇದನ್ನೂ ಓದಿ- ADGP Alok Kumar : ಬೆಳ್ಳಾರೆ ಪ್ರವೀಣ್ ಕೊಲೆ ಕೇಸ್ : ಆರೋಪಿಗಳ ಆಸ್ತಿ ಮುಟ್ಟುಗೋಲು


ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ: 
ದಿನಾಂಕ 12-08-2022 - ಕನ್ನಡ, ಅರೇಬಿಕ್
ದಿನಾಂಕ 13-08-2022 - ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
ದಿನಾಂಕ 16-08-2022 - ಹಿಂದಿ
ದಿನಾಂಕ 17-08-2022 - ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
ದಿನಾಂಕ 18-08-2022 - ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ದಿನಾಂಕ 19-08-2022 -ಸ ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ
ದಿನಾಂಕ 20-08-2022 - ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
ದಿನಾಂಕ 22-08-2022 - ಇಂಗ್ಲೀಷ್
ದಿನಾಂಕ 23-08-2022 - ಅರ್ಥಶಾಸ್ತ್ರ, ಜೀವಶಾಸ್ತ್ರ
ದಿನಾಂಕ 24-08-2022-ಇತಿಹಾಸ, ಸಂಖ್ಯಾಶಾಸ್ತ್ರ
ದಿನಾಂಕ 25-08-2022 - ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.