ಮಂಡ್ಯಕ್ಕೆ ಅಂಬಿ ಪಾರ್ಥಿವ ಶರೀರ ತರಲು ಒತ್ತಾಯಿಸಿ ಪ್ರತಿಭಟನೆ; ನಿಷೇಧಾಜ್ಞೆ ಜಾರಿ

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

Updated: Nov 25, 2018 , 10:23 AM IST
ಮಂಡ್ಯಕ್ಕೆ ಅಂಬಿ ಪಾರ್ಥಿವ ಶರೀರ ತರಲು ಒತ್ತಾಯಿಸಿ ಪ್ರತಿಭಟನೆ; ನಿಷೇಧಾಜ್ಞೆ ಜಾರಿ

ಮಂಡ್ಯ: ಎರಡು ಗಂಟೆಗಳ ಅವಧಿಗಾದರೂ ರೆಬಲ್ ಸ್ಟಾರ್ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತರಬೇಕೆಂದು ಒತ್ತಾಯಿಸಿ ಅಂಬರೀಶ್ ಅಭಿಮಾನಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. 

ಅಂಬರೀಶ್ ಅವರು ಮಂಡ್ಯದ ಗಂಡು. ಅವರ ಸ್ವಂತ ಸ್ಥಳ ಮಂಡ್ಯ ಆಗಿರುವುದರಿಂದ ಕೆಲ ಗಂಟೆಗಳ ಮಟ್ಟಿಗಾದರೂ ಹೆಲಿಕಾಪ್ಟರ್ ನಲ್ಲಿ ಪಾರ್ಥಿವ ಶರೀರ ತಂದು ಮಂಡ್ಯದ ಜನತೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿ ಮಂಡ್ಯದ ಸಂಜಯ ವೃತ್ತದಲ್ಲಿ ಪ್ರತಿಭಟನೆ ಆರಂಭಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಿ, ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಆದೇಶ ಹೊರಡಿಸಿದ್ದಾರೆ.

ಆದರೆ, ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಜನರು ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ.