ಉಡುಪಿಯಲ್ಲಿ ಭಾರತ್ ಬಂದ್ ವೇಳೆ ಮಾರಾಮಾರಿ; ನಿಷೇಧಾಜ್ಞೆ ಜಾರಿ

ನಗರಸಭೆ ವ್ಯಾಪ್ತಿಯಲ್ಲಿ ನಾಳೆ ಬೆಳಗ್ಗೆ 6 ಗಂಟೆವರೆಗೆ 144 ಸೆಕ್ಷನ್​ ಜಾರಿಗೊಳಿಸಿ ತಹಸೀಲ್ದಾರ್ ಪ್ರದೀಪ್ ಕುರುಡೇಕರ್ ಆದೇಶ ಹೊರಡಿಸಿದ್ದಾರೆ.

Last Updated : Sep 10, 2018, 04:03 PM IST
ಉಡುಪಿಯಲ್ಲಿ ಭಾರತ್ ಬಂದ್ ವೇಳೆ ಮಾರಾಮಾರಿ; ನಿಷೇಧಾಜ್ಞೆ ಜಾರಿ title=

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ನಡೆಸುತ್ತಿರುವ ಭಾರತ್ ಬಂದ್ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಹಿನ್ನೆಲೆಯಲ್ಲಿ ಗಲಭೆ ಉಂಟಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. 

ಉಡುಪಿಯ ಬನ್ನಂಜೆ ಪೋಲಿಸ್ ಅಧೀಕ್ಷಕರ ಕಚೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ಬಂದ್ ನಡೆಸಲು ವಿರೋಧ ವ್ಯಕ್ತಪಡಿಸಿದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನಗರಾಧ್ಯಕ್ಷ ಪ್ರಭಾಕರ ಪೂಜಾರಿ ಮೇಲೆ​ ಹಲ್ಲೆ ನಡೆಸಿದ್ದರು. ಇದನ್ನು ಖಂಡಿಸಿ ಕೈ-ಕಮಲ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆಯಿತು. ಇದನ್ನು ಕಾರ್ಯಕರ್ತರ ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು ನಗರಸಭೆ ವ್ಯಾಪ್ತಿಯಲ್ಲಿ ನಾಳೆ ಬೆಳಗ್ಗೆ 6 ಗಂಟೆವರೆಗೆ 144 ಸೆಕ್ಷನ್​ ಜಾರಿಗೊಳಿಸಿ ತಹಸೀಲ್ದಾರ್ ಪ್ರದೀಪ್ ಕುರುಡೇಕರ್ ಆದೇಶ ಹೊರಡಿಸಿದ್ದಾರೆ.

ಅಲ್ಲದೆ, ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಉಡುಪಿ ನಗರದಲ್ಲಿ ವಿಜಯೋತ್ಸವ, ಕರಾಳೋತ್ಸವ ಆಚರಿಸದಂತೆ, ಆಯುಧಗಳನ್ನು ಕೊಂಡೊಯ್ಯದಂತೆ ಎಚ್ಚರಿಕೆ ನೀಡಲಾಗಿದೆ. ನಗರದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Trending News