ಜಾತಿ ಗಣತಿ ವರದಿ ನೋಡಿ ಅಂತಿಮ ನಿರ್ಧಾರ: ಸಚಿವ ಎಂ ಬಿ ಪಾಟೀಲ್

Minister MB Patil: ಜಾತಿ ಗಣತಿ ವರದಿ ಬಗ್ಗೆ ವಿಶೇಷವಾಗಿ ವೀರಶೈವ ಲಿಂಗಾಯತ ಸಮುದಾಯದವರಿಗೆ ಆತಂಕ ಇರುವುದು ನಿಜ. ಏಕೆಂದರೆ ಇಲ್ಲಿ ಹೆಚ್ಚಿನವರು ಉಪಪಂಗಡಗಳ ಹೆಸರು ಬರೆಸಿದ್ದಾರೆ. ಇದರ ಬದಲು ಎಲ್ಲ ಉಪಪಂಗಡಗಳೂ 'ವೀರಶೈವ ಲಿಂಗಾಯತ' ಎಂದಾಗಬೇಕು ಎಂದು ನಾವು ದನಿ ಎತ್ತಿದ್ದು ನಿಜ ಎಂದು ಅವರು ವಿವರಿಸಿದರು.

Written by - Prashobh Devanahalli | Edited by - Bhavishya Shetty | Last Updated : Feb 29, 2024, 08:32 PM IST
    • ಹಿಂದುಳಿದ ವರ್ಗಗಳ ಆಯೋಗವು ಸರ್ಕಾರಕ್ಕೆ ಜಾತಿ ಗಣತಿ ವರದಿಯನ್ನು ಸಲ್ಲಿಸಿದೆ
    • ವೀರಶೈವ ಲಿಂಗಾಯತ ಸಮುದಾಯದವರಿಗೆ ಆತಂಕ ಇರುವುದು ನಿಜ
    • ಆತಂಕಗಳು ಒಕ್ಕಲಿಗರು ಸೇರಿದಂತೆ ಹಲವು ಸಮುದಾಯಗಳಿಗೆ ಇದೆ
ಜಾತಿ ಗಣತಿ ವರದಿ ನೋಡಿ ಅಂತಿಮ ನಿರ್ಧಾರ: ಸಚಿವ ಎಂ ಬಿ ಪಾಟೀಲ್ title=
File Photo

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗವು ಸರ್ಕಾರಕ್ಕೆ ಜಾತಿ ಗಣತಿ ವರದಿಯನ್ನು ಸಲ್ಲಿಸಿದೆ. ಅದರಲ್ಲಿ ಏನಿದೆಯೋ ಗೊತ್ತಿಲ್ಲ. ಅದನ್ನು ಗಮನಿಸಿದ ಮೇಲೆ ವರದಿಯನ್ನು ಒಪ್ಪಿಕೊಳ್ಳಬೇಕೋ, ಬಿಡಬೇಕೋ ಎನ್ನುವುದನ್ನು ಸರ್ಕಾರವು ತೀರ್ಮಾನಿಸಲಿದೆ ಎಂದು ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳು ಗುರುವಾರ ಇಲ್ಲಿ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಇದನ್ನೂ ಓದಿ: Coconut Milk: ಜಸ್ಟ್ ಒಂದು ಕಪ್ ತೆಂಗಿನಕಾಯಿ ಹಾಲು… ಅನೇಕ ರೋಗಗಳಿಗೆ ಇದೊಂದೇ ರಾಮಬಾಣ

ಜಾತಿ ಗಣತಿ ವರದಿ ಬಗ್ಗೆ ವಿಶೇಷವಾಗಿ ವೀರಶೈವ ಲಿಂಗಾಯತ ಸಮುದಾಯದವರಿಗೆ ಆತಂಕ ಇರುವುದು ನಿಜ. ಏಕೆಂದರೆ ಇಲ್ಲಿ ಹೆಚ್ಚಿನವರು ಉಪಪಂಗಡಗಳ ಹೆಸರು ಬರೆಸಿದ್ದಾರೆ. ಇದರ ಬದಲು ಎಲ್ಲ ಉಪಪಂಗಡಗಳೂ 'ವೀರಶೈವ ಲಿಂಗಾಯತ' ಎಂದಾಗಬೇಕು ಎಂದು ನಾವು ದನಿ ಎತ್ತಿದ್ದು ನಿಜ ಎಂದು ಅವರು ವಿವರಿಸಿದರು.

ಇದನ್ನೂ ಓದಿ: ವಾಟ್ಸ್ ಆಪ್ ನಲ್ಲಿ ಇನ್ಮುಂದೆ ದಿನಾಂಕ ಆಧರಿಸಿ ನೀವು ಈ ಕೆಲಸ ಮಾಡಬಹುದು, ಹೊಸ ವೈಶಿಷ್ಟ್ಯ ಬಿಡುಗಡೆ!

ಇದೇ ರೀತಿಯ ಗೊಂದಲ, ಆತಂಕಗಳು ಒಕ್ಕಲಿಗರು ಸೇರಿದಂತೆ ಹಲವು ಸಮುದಾಯಗಳಿಗೆ ಇದೆ. ಇವೆಲ್ಲವನ್ನೂ ಸರ್ಕಾರ ಪರಿಗಣನೆಗೆ ತೆಗೆದುಕೊಳ್ಳಲಿದೆ. ಅಂತಿಮ ತೀರ್ಮಾನ ಸರಕಾರದ ವಿವೇಚನೆಗೆ ಬಿಟ್ಟಿದ್ದು ಎಂದು ಅವರು ಪ್ರತಿಪಾದಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News