ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ, ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಹತ್ತು ದಿನಗಳ ಉಚಿತ ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಅರ್ಜಿ ಸಲ್ಲಿಸುವವರು ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿದ್ದು, 18 ವರ್ಷ ಮೇಲ್ಪಟ್ಟು 45 ವರ್ಷ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಉತ್ತೀರ್ಣರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು.ಅರ್ಜಿ ವಿತರಿಸಲು ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ಸ್ವೀಕರಿಸಲು ಸೆಪ್ಟೆಂಬರ್ 19 ಕೊನೆಯ ದಿನವಾಗಿದೆ. ಸೆ. 20 ರಂದು ಸಂದರ್ಶನ ನಡೆಯಲಿದ್ದು, ಸೆ. 21 ರಿಂದ ತರಬೇತಿ ಆರಂಭವಾಗಲಿದೆ.


ಭರ್ತಿ ಮಾಡಿದ ಅರ್ಜಿಯನ್ನು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ವಿಳಾಸಕ್ಕೆ_ಸಲ್ಲಿಸಬೇಕು. ಹೆಚ್ಚಿನ_ಮಾಹಿತಿಗಾಗಿ ದೂ.ಸಂ: 08539-231038  ಮೊ: 9448960002 ಗೆ ಸಂಪರ್ಕಿಸಬಹುದು ಎಂದು ಆರ್‌ಸೆಟಿ ನಿರ್ದೇಶಕರು ಪ್ರಕಟಣೆಯಲ್ಲಿ #ತಿಳಿಸಿದ್ದಾರೆ.