ಬೆಂಗಳೂರು : ನಾವು ನಿರೀಕ್ಷೆ ಮಾಡಿದಷ್ಠು ಸ್ಥಾನಗಳನ್ನು ಪಡೆಯುವಲ್ಲಿ ವಿಫಲರಾಗಿದ್ದೇವೆ.ಆದರೆ ಕಳೆದ 2019ರ  ಚುನಾವಣೆಗೆ ಹೋಲಿಸಿದರೆ ನಮ್ಮ ಪಕ್ಷ ದೇಶದಾದ್ಯಂತ ಉತ್ತಮ ಸ್ಥಾನ ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಮುನಿಯಪ್ಪ ತಿಳಿಸಿದ್ದಾರೆ. ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ನಮ್ಮ ನಾಯಕರಾದ ರಾಹುಲ್ ಗಾಂಧಿ ,ಸೋನಿಯಾ ಗಾಂಧಿಯವರು ಬಡವರ ಪರವಾದ ಪ್ರಣಾಳಿಕೆಯನ್ನು ಘೋಷಿಸಿದ್ದರು.ಅದರ ಪ್ರತೀಕವಾಗಿ ಉತ್ತರ ಭಾರತದ ರಾಜ್ಯಗಳಲ್ಲಿ ಹಲವು ಸ್ಥಾನ ಗಳನ್ನು ಗೆದ್ದಿದೆ.ಆದರೆ, ದಕ್ಷಿಣ ಭಾರತದ ರಾಜ್ಯಗಳ ಕಡೆ ಮಿಶ್ರ ಫಲಿತಾಂಶ ಬಂದಿರುವುದರಿಂದ ನಮಗೆ ಸ್ವಲ್ಪ ಹಿನ್ನಡೆಯಾಗಿದೆ ಎಂದು ಅಭಿಪ್ರಾಯಪಟ್ಟರು. 


COMMERCIAL BREAK
SCROLL TO CONTINUE READING

ಕೋಲಾರ ಜಿಲ್ಲೆಯಲ್ಲಿ ನಾಯಕರ ಒಗ್ಗಟ್ಟಿನ ಕೊರತೆಯಿಂದಾಗಿ ನಾವು ಕೋಲಾರ ಕ್ಷೇತ್ರ ವನ್ನು ಗೆಲ್ಲುವಲ್ಲಿ ವಿಫಲವಾಗಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹಲವಾರು ಬಾರಿ ಹೈಕಮಾಂಡ್ ನಾಯಕರು ಹಾಗೂ ರಾಜ್ಯ ನಾಯಕರ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಕೋಲಾರ ಜಿಲ್ಲೆಯಲ್ಲಿ ಶಾಸಕರ ಒಗ್ಗಟ್ಟಿನ ಕೊರತೆ ಹಾಗೂ ಶಾಸಕರ ಸ್ವಪ್ರತಿಷ್ಠೆಗಳ ಕಾರಣ ದಿಂದಾಗಿ ನಾವು ಕೋಲಾರ, ಚಿಕ್ಕಬಳ್ಳಾಪುರ ಕ್ಷೇತ್ರಗಳ ಸೋಲಿಗೆ ಕಾರಣವಾಯಿತು ಎಂದು ಹೇಳಿದ್ದಾರೆ. 


ಇದನ್ನೂ ಓದಿ : ಗೌಡರ ಗದ್ದಲ :ಲೋಕಸಭೆ ನಂತರವೂ ಮುಂದುವರೆಯುತ್ತಾ H D ಕುಟುಂಬ vs D K ಬ್ರದರ್ಸ್ ಕದನ?


ಕೋಲಾರದಲ್ಲಿ ಈಗಲೂ ಕಾಲ ಮಿಂಚಿಲ್ಲ. ಮುಂಬರುವ ತಾಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಸ್ಥಾನಗಳನ್ನು ಗೆಲ್ಲಬೇಕಾದರೆ ನಾವೆಲ್ಲಾರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಈ ಬಗ್ಗೆ ನಾನು ಮೊದಲಿನಿಂದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ.ಶಿವಕುಮಾರ್ ರವರ ಗಮನಕ್ಕೆ ತರಲಾಗಿತ್ತು. ಒಂದು ವೇಳೆ ಕೋಲಾರದ  ಸಮಸ್ಯೆಯನ್ನು ಬಗೆಹರಿಸಿದ್ದರೆ ಅಲ್ಲಿ ನಮಗೆ ಸೋಲಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ. 


ರಾಜ್ಯದಲ್ಲಿ ಎಲ್ಲಾ ಕಡೆ ನಮ್ಮ ಸಚಿವರು ಉತ್ತಮ ಕೆಲಸ ಮಾಡಿದ್ದಾರೆ. ನಮಗೆ ಮತದಾನದ ಪ್ರಮಾಣದಲ್ಲಿ ಕಡಿಮೆಯಾಗಿಲ್ಲ.ಕಾಂಗ್ರೆಸ್ ಪಕ್ಷದ ಮತಗಳು ಹೆಚ್ಚಾಗಿಯೇ ಬಂದಿದೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹೊಂದಾಣಿಕೆಯಿಂದಾಗಿ ಅವರ ಗೆಲುವು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ : Karnataka Weather: ರಾಜ್ಯದ 17 ಜಿಲ್ಲೆಗಳಲ್ಲಿ ವ್ಯಾಪಕ ಮಳೆ, ಕೆಲವೆಡೆ ಯೆಲ್ಲೋ ಅಲರ್ಟ್


ಚುನಾವಣೆಯಲ್ಲಿ ಸೋಲು ಗೆಲವು ಸಾಮಾನ್ಯ. 1991 ರಲ್ಲಿ ರಾಮಕೃಷ್ಣ ಹೆಗಡೆ ಯವರು ನ್ಯಾಮಗೌಡ ರವರ ವಿರುದ್ಧ ಜಮಖಂಡಿಯಲ್ಲಿ ಸೋಲನ್ನು ಅನುಭವಿಸಿದ್ದರು. ಹಾಗೆಯೇ ಡಿಕೆ ಸುರೇಶ್ ರವರು ಉತ್ತಮವಾದ ಕೆಲಸಗಳನ್ನು ಮಾಡಿದ್ದು ಸಾಮಾನ್ಯವರ್ಗದವರು ಹಾಗೂ ಬಡವರ ಪರವಾಗಿ ಕೆಲಸ ಮಾಡುತ್ತಿದ್ದಂತಹ ಸಂಸದ.ಅವರ ಸೋಲನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.