Shashikala Jolle : ಕೋವಿಡ್ ಲಸಿಕೆ ಪಡೆಯಲು ಹಿರಿಯ ನಾಗರೀಕರಿಗೆ ಬೇಕಿಲ್ಲ 'ಆಧಾರ್ ಕಾರ್ಡ್'..!

 ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆ

Last Updated : May 17, 2021, 05:03 PM IST
  • ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆ
  • ಆರೋಗ್ಯ ಸಚಿವರಿಗೆ ಮನವಿ ಮಾಡಲಾಗಿದ್ದು ಶ್ರೀಘ್ರವೆ ಲಸಿಕೆ
  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ
Shashikala Jolle : ಕೋವಿಡ್ ಲಸಿಕೆ ಪಡೆಯಲು ಹಿರಿಯ ನಾಗರೀಕರಿಗೆ ಬೇಕಿಲ್ಲ 'ಆಧಾರ್ ಕಾರ್ಡ್'..! title=

ಬೆಂಗಳೂರು : ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಆರೋಗ್ಯ ಸಚಿವರಿಗೆ ಮನವಿ ಮಾಡಲಾಗಿದ್ದು ಶ್ರೀಘ್ರವೆ ಲಸಿಕೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ನಗರದ್ಲಲಿ ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು(Shashikala Annasaheb Jolle), ಸಮಗ್ರ ಮಕ್ಕಳ ರಕ್ಷಣಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರನ್ನು ಕೊರೋನಾ ಸೇನಾನಿಗಳೆಂದು ಭಾವಿಸಿ ಅವರಿಗೂ ಲಸಿಕೆಯನ್ನು ನೀಡಬೇಕು, ಹಾಗೂ ಹೈಕೋರ್ಟ್ ಆದೇಶದಂತೆ ಹಿರಿಯ ನಾಗರಿಕರಿಗೆ ಹಾಗೂ ವಿಕಲ ಚೇತನರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಸಚಿವರಿಗೆ ಮನವಿ ಮಾಡಿದರು.

ಇದನ್ನೂ ಓದಿ : Black Fungus : ಬ್ಲ್ಯಾಕ್ ಫಂಗಸ್ ಬಗ್ಗೆ 'ಶಾಕಿಂಗ್' ಹೇಳಿಕೆ ನೀಡಿದ ಸಚಿವ ಸುಧಾಕರ್..!

ಅಲ್ಲದೆ ಪ್ರಮುಖವಾಗಿ ಎಲ್ಲಾ ಜಿಲ್ಲಾ ಹಾಗೂ ತಾಲೂಕಾ ಆಸ್ಪತ್ರೆಯಲ್ಲಿ ಕೋವಿಡ್(Covid-19) ಸೋಂಕಿತ ಮಕ್ಕಳಿಗಾಗಿ ಬೆಡ್ ಕಾಯ್ದಿರಿಸುವಂತೆ ಮನವಿ ಮಾಡಿದರು. ಮನವಿ ಸ್ವೀಕರಿಸಿದ ಆರೋಗ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ ಇವುಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ : S Suresh Kumar : SSLC - ದ್ವಿತೀಯ PUC ಪರೀಕ್ಷೆ ರದ್ದು? ಈ ಸುದ್ದಿ ನಿಜಾನಾ ಇಲ್ಲಿದೆ ನೋಡಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News