DB Inamdar: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ.ಬಿ.ಇನಾಂದಾರ್ ನಿಧನ
Ex-Minister DB Inamdar passed away: ಈವರೆಗೆ 9 ಚುನಾವಣೆ ಎದುರಿಸಿದ್ದ ಡಿ.ಬಿ.ಇನಾಂದಾರ್ 1983, 1985ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದ್ದರು.
ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಬಿ.ಇನಾಂದಾರ್ ನಿಧನರಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇನಾಂದಾರ್ ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇನಾಂದಾರ್ ಅವರಿಗೆ 74 ವರ್ಷ ವಯಸ್ಸಾಗಿತ್ತು. ಲಂಗ್ಸ್ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ ಹಲವು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಇದಲ್ಲದೆ ಸಿರಸಂಗಿ ದೇಸಾಯಿ ಫೌಂಡೇಷನ್ ಟ್ರಸ್ಟ್ನ ಖಾಯಂ ಸದಸ್ಯರಾಗಿದ್ದರು.
ಇದನ್ನೂ ಓದಿ: ಸೆಂಟ್ರಲ್ ಕ್ಷೇತ್ರದಿಂದ 35 ಸಾವಿರ ಅಂತರದಲ್ಲಿ ಗೆಲ್ಲಲು ಅಮಿತ್ ಶಾ ಸೂಚನೆ: ಅರವಿಂದ ಬೆಲ್ಲದ್
ಇನ್ನು ಇನಾಂದಾರ್ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ‘ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಚಿವರು ಆದ ಡಿ.ಬಿ.ಇನಾಂದಾರ್ ನಿಧನದ ಸುದ್ದಿ ಕೇಳಿ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳಿಗೆ ಇನಾಂದಾರ್ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಶೆಟ್ಟರ್ ಕ್ಷಮೆ ಕೇಳುವ ಪ್ರಮೇಯವೇ ಬಂದಿಲ್ಲ: ಕೇಂದ್ರ ಸಚಿವ ಜೋಶಿ
ಇನಾಂದಾರ್ ರಾಜಕೀಯ ಜೀವನ
ಇನಾಂದಾರ್ ಅವರು 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಗೆಲುವು ಸಾಧಿಸಿದ್ದರು. 1994ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈವರೆಗೆ 9 ಚುನಾವಣೆ ಎದುರಿಸಿದ್ದ ಅವರು 1983, 1985ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದ್ದರು. 1989, 2004, 2008 ಹಾಗೂ 2018ರಲ್ಲಿ ಸೋಲು ಕಂಡಿದ್ದರು. ಮಾಜಿ ಸಿಎಂಗಳಾದ ಡಿ.ದೇವರಾಜ ಅರಸು, ಎಸ್.ಎಂಕೃಷ್ಣ, ಎಸ್.ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.