ಬೆಂಗಳೂರು: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ "ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ" ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ ,ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ,ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು 2024 ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ "ವಡ್ಡರ್ಸೆ ರಘುರಾಮಶೆಟ್ಟಿ" ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು. ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು "ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.
ಇದನ್ನೂ ಓದಿ : ನಿಗದಿತ ಅವಧಿಯೊಳಗೆ ಮನೆ ಕಟ್ಟದವರಿಗೆ ದಂಡ ಫಿಕ್ಸ್: ಬಿಡಿಎ ಎಚ್ಚರಿಕೆ
ಡಿ.ಉಮಾಪತಿ ಅವರ ಪರಿಚಯ:
ಮಾರ್ಚ್ 18,1959 ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ ಉಮಾಪತಿ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಎರಡನೆ ರ‍್ಯಾಂಕ್ ಪಡೆದವರು. ನ್ಯೂ ಇಂಡಿಯನ್ ಎಕ್ಸಪ್ರೆಸ್ ಸಮೂಹ ಸಂಸ್ಥೆಯ ಕನ್ನಡಪ್ರಭ, ಈ ಟಿವಿಯ ದೆಹಲಿ ಕರೆಸ್ಪಾಂಡೆಂಟ್ ಅಗಿ 27 ವರ್ಷಗಳ ಪರಿಣಾಮಕಾರಿ ವರದಿಗಳಿಂದ ಹೆಸರುಗಳಿಸಿದ್ದಾರೆ. ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು , ಸುಪ್ರೀಂ ಕೋರ್ಟು ಗಳಲ್ಲಿನ ನದಿ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು, ಮತ್ತು ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಇವರದ್ದಾಗಿದೆ. ದೆಹಲಿಯಲ್ಲಿ ನೆಲೆಸಿರುವ ಡಿ. ಉಮಾಪತಿ ಅವರು ರಾಜ್ಯದ ಪ್ರಮುಖ ಪತ್ರಿಕೆಗಳಲ್ಲಿ ದೆಹಲಿಯ ಹಿರಿಯ ವರದಿಗರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಈಗ ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ಇದುವರೆಗೆ ಸುಮಾರು 2 ಲಕ್ಷ ಮಂದಿ ಈ ವಿಡಿಯೋವನ್ನು ವೀಕ್ಷಿಸಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.