ಮೈಸೂರು: ಹಿರಿಯ ರಂಗಕರ್ಮಿ ಹಾಗೂ ವಾಕ್ ಮತ್ತು ಶ್ರವಣ ತಜ್ಞ ನ.ರತ್ನ ಅವರು ಹೃದಯಾಘಾತದಿಂದ ಬುಧುವಾರ ಬೆಳಗ್ಗೆ ಮೈಸೂರಿನ ಸರಸ್ವತಿಪುರಂನಲ್ಲಿರುವ್ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ.ಈಗ ಅವರು ಪತ್ನಿ, ಪುತ್ರ,ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಹಿರಿಯ ರಂಗಕರ್ಮಿ ಮತ್ತು ವಾಕ್ಶ್ರವಣ ಶಿಕ್ಷಣ ತಜ್ಞ ಡಾ.ನ.ರತ್ನ ಅವರ ಅಗಲಿಕೆ ಎಂದೆಂದೂ ತುಂಬಲಾರದ ನಷ್ಟ.
ಅಧ್ಯಾಪನ ಮತ್ತು ರಂಗಚಟುವಟಿಗಳ ಜೊತೆಗೆ ಮೈಸೂರಿನ ಪ್ರಖ್ಯಾತ ವಾಕ್ ಶ್ರವಣ ಚಿಕಿತ್ಸಾ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಡಾ.ನ.ರತ್ನ ಅವರು ದೈಹಿಕ ನ್ಯೂನತೆ ಹೊಂದಿರುವ ಸಾವಿರಾರು ಜನರ ಪಾಲಿನ ಜೀವದಾತರಾಗಿದ್ದರು.
ಈ ಪುಣ್ಯಪುರುಷನ… pic.twitter.com/2niYMQtOA1
— CM of Karnataka (@CMofKarnataka) June 19, 2024
1934ರ ಡಿ.12 ರಲ್ಲಿ ತಮಿಳುನಾಡಿನ ಚಿದಂಬರಂನಲ್ಲಿ ಜನಿಸಿದ ನ ರತ್ನ ಅವರು ಮೈಸೂರು ಹಾಗೂ ಅಮೇರಿಕಾದಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಪೂರೈಸಿದರು.ಮುಂದೆ ಅಖಿಲ ಭಾರತ ಶ್ರಾವಣ ಸಂಸ್ಥೆ ಮೊದಲ ನಿರ್ದೇಶಕರಾಗಿ ಈ ಸಂಸ್ಥೆಯನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು.
ಈಗ ಇವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ"ಹಿರಿಯ ರಂಗಕರ್ಮಿ ಮತ್ತು ವಾಕ್ಶ್ರವಣ ಶಿಕ್ಷಣ ತಜ್ಞ ಡಾ.ನ.ರತ್ನ ಅವರ ಅಗಲಿಕೆ ಎಂದೆಂದೂ ತುಂಬಲಾರದ ನಷ್ಟ.ಅಧ್ಯಾಪನ ಮತ್ತು ರಂಗಚಟುವಟಿಗಳ ಜೊತೆಗೆ ಮೈಸೂರಿನ ಪ್ರಖ್ಯಾತ ವಾಕ್ ಶ್ರವಣ ಚಿಕಿತ್ಸಾ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಡಾ.ನ.ರತ್ನ ಅವರು ದೈಹಿಕ ನ್ಯೂನತೆ ಹೊಂದಿರುವ ಸಾವಿರಾರು ಜನರ ಪಾಲಿನ ಜೀವದಾತರಾಗಿದ್ದರು.ಈ ಪುಣ್ಯಪುರುಷನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಅವರು ಕಂಬನಿ ಮಿಡಿದಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.