ಬೆಂಗಳೂರು ಆರೋಗ್ಯ ಸುಧಾರಣೆಗೆ ಪ್ರತ್ಯೇಕ ವಿಭಾಗ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Bangalore Health : ಸರ್ಕಾರಿ ಆರೋಗ್ಯ ಕ್ಷೇತ್ರವನ್ನ ಬಲಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಲ್ಲಿ ಪ್ರತ್ಯೇಕ ವಿಭಾಗ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

Written by - Prashobh Devanahalli | Last Updated : Sep 7, 2023, 08:07 PM IST
  • ಸರ್ಕಾರಿ ಆರೋಗ್ಯ ಕ್ಷೇತ್ರವನ್ನ ಬಲಪಡಿಸಲು ಕ್ರಮ
  • ಬೆಂಗಳೂರು ಆರೋಗ್ಯ ಸುಧಾರಣೆಗೆ ಪ್ರತ್ಯೇಕ ವಿಭಾಗ
  • ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ
ಬೆಂಗಳೂರು ಆರೋಗ್ಯ ಸುಧಾರಣೆಗೆ ಪ್ರತ್ಯೇಕ ವಿಭಾಗ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್  title=
Dinesh Gundurao

ಬೆಂಗಳೂರು: ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಮಾತನಾಡುತ್ತಿದ್ದರು.‌ ಪ್ರಸ್ತುತ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ನಮ್ಮ ಕ್ಲಿನಿಕ್ ಗಳನ್ನ ಮಹಾನಗರ ಪಾಲಿಕೆ ನಿರ್ವಹಿಸುತ್ತಿದೆ. ಆದರೆ‌ ಹಲವು ಆರೋಗ್ಯ ಸೇವೆಗಳನ್ನ ಒದಗಿಸಲು ಪಾಲಿಕೆಗೆ ಸಾಧ್ಯವಿಲ್ಲ. ಹೀಗಾಗಿ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ವಿಭಾಗ ಅಥವಾ ಕಮಿಷನರೇಟ್ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ನಿಯಂತ್ರಣ ವಿಚಾರವಾಗಿ ಮುಂಜಾಗೃತೆ ವಹಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಡೆಂಗ್ಯೂ ಮೇಲ್ವಿಚಾರಣ ತಂತ್ರಾಂಶ”ವನ್ನು ಅನಾವರಣಗೊಳಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. 

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ತಡೆಯುವ ಹಾಗೂ ಇನ್ನಿತರೆ ಆರೋಗ್ಯ ವಿಷಯಕ್ಕೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ  ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಕಳೆದ 2 ತಿಂಗಳಿಂದ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಔಷಧಿ ಸಿಂಪಡಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕ್ರಮೇಣವಾಗಿ ಡೆಂಗ್ಯೂ ಪ್ರಕರಣಗಳು ನಿಯಂತ್ರಣಕ್ಕೆ ತರುಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ದೇವಾಲಯಗಳ ಸ್ವಚ್ಛತೆಗೆ ಮುಜರಾಯಿ ಇಲಾಖೆ ಖಡಕ್ ನಿರ್ಧಾರ..!!

ನಗರದಲ್ಲಿ ಜುಲೈ ನಲ್ಲಿ 1649, ಆಗಸ್ಟ್ ನಲ್ಲಿ 1589, ಸೆಪ್ಟಂಬರ್ ನಲ್ಲಿ 416 ಪ್ರಕರಣಗಳು ಪತ್ತೆಯಾಗಿವೆ. ಮುಖ್ಯವಾಗಿ ಮಳೆಯಾಗಿ ನೀರು ನಿಂತ ಕಾರಣ ಸೊಳ್ಳ್ಳೆಗಳ ಲಾರ್ವಾ ಉತ್ಪತ್ತಿಯಾಗಿರುವುದರಿಂದ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಈ ಸಂಬಂಧ ಎಲ್ಲಾ ಕಡೆ ಔಷಧಿ ಸಿಂಪಡಣೆ ಮಾಡಲಾಗುತ್ತಿದ್ದು, ಅದನ್ನು ಮತ್ತಷ್ಟು ಹೆಚ್ಚಿಸಲು ಸೂಚನೆ ನಿಡಲಾಗಿದೆ. ಅಲ್ಲದೇ ಎಲ್ಲಾ ಆರೋಗ್ಯ ವೈದ್ಯಾಧಿಕಾರಿಗಳಿಗೆ ಹೆಚ್ಚು ನಿಗಾ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಪಾಲಿಕೆಯ ವ್ಯಾಪ್ತಿಯಲ್ಲಿ 6 ಹೈಟೆಕ್ ಲ್ಯಾಬ್ ಗಳಿದ್ದು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಮ್ಮ ಕ್ಲಿನಿಕ್ ಗಳಲ್ಲಿ ಸಂಗ್ರಹ ಮಾಡುವ ಬ್ಲಡ್ ಸ್ಯಾಂಪಲ್ ಗಳನ್ನು ಲ್ಯಾಬ್ ಗಳಿಗೆ ಕಳುಹಿಸಲು ರವಾನೆ(ಹಬ್ ಅಂಡ್ ಸ್ಪೋಕ್ ಮಾಡಲ್) ಹಾಗೂ ಇನ್ನಿತರೆ ಸೌಲಭ್ಯಗಳ ಅವಶ್ಯಕತೆಯಿದ್ದು, ಅದಕ್ಕೆ ಅನುದಾನ ಬೇಕಾಗಿದ್ದು, ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪಾಲಿಕೆ ಸಹಯೋಗದೊಂದಿಗೆ ಎನ್.ಹೆಚ್.ಎಂ ಅನುದಾನದಿಂದ ಒದಗಿಸಲಾಗುವುದು ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು, ಕಿರಿಯ ಆರೋಗ್ಯ ಮಹಿಳಾ ಸಹಾಯಕಿಯರ ಸಂಖ್ಯೆಯನ್ನು ಹೆಚ್ಚಿಸುವ ಜೊತೆಗೆ ಅವರ ವೇತನವನ್ನು ಕೂಡಾ ಕಾರ್ಮಿಕ ಇಲಾಖೆ ಕಾಯ್ದೆ ಕನಿಷ್ಟ ವೇತನ ಹೆಚ್ಚಳ ಮಾಡಬೇಕಿದ್ದು, ಅದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ: 60 ಲಕ್ಷ‌ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ : ಸಚಿವೆ ಲಕ್ಷ್ಮೀ ಹಬ್ಬಾಳ್ಕರ್ ಮಾಹಿತಿ

ನಗರದಲ್ಲಿ ಎಲ್ಲಾ ಆರೋಗ್ಯ ಸೇವೆಗಳನ್ನು ಸಮನಾಂತರವಾಗಿ ತರುವ ಉದ್ದೇಶದಿಂದ ಬಿಬಿಎಂಪಿಯನ್ನು ಪ್ರತ್ಯೇಖ ಜಿಲ್ಲೆ ಎಂದು ಪರಿಗಣಿಸಲು ನಿರ್ಧಾರ ಮಾಡಲಾಗಿದ್ದು, ಈ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಡೆಂಗ್ಯೂ ಮುನ್ಸೂಚನಾ ತಂತ್ರಾಂಶ ಅನಾವರಣ:

ಡೆಂಗ್ಯೂ ಪ್ರಕರಣಗಳನ್ನು ಒಂದು ತಿಂಗಳ ಮುಂಚಿತವಾಗಿಯೇ ತಿಳಿಯುವ ಉದ್ದೇಶದಿಂದ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಒಂದು ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಇದರಿಂದ ಮುಂಚಿತವಾಗಿಯೇ ಮಾಹಿತಿ ಲಭ್ಯವಾಗಲಿದ್ದು, ಕೂಡಲೆ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡು ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ನಮ್ಮ ಕ್ಲಿನಿಕ್ ಸಂಜೆ ಸೇವೆ:

ಬಿಬಿಎಂಪಿ ವ್ಯಾಪ್ತಿಯಲ್ಲಿ 50 ನಮ್ಮ ಕ್ಲಿನಿಕ್ ಗಳು ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಈ ಸಮಯದಲ್ಲಿ ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಲ್ಯಾಬ್ ಟೆಕ್ನಿಷಿಯನ್ ಗಳು ಹಾಗೂ ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ವೈದ್ಯರು, ನರ್ಸ್ಗಳಿರುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

Trending News