ಬೆಂಗಳೂರು: ಸಿಲಿಂಡರ್ ಬ್ಲಾಸ್ಟ್ ಆಗಿ ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗಿನ ಜಾವ 6 ಗಂಟೆಗೆ ಬೆಂಗಳೂರಿನ ಚಂದ್ರಾಲೇಔಟ್ ನಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ ವ್ಯಕ್ತಿಯನ್ನು ಮೊಹಮ್ಮದ್ ( 64)  ಎಂದು ಗುರುತಿಸಲಾಗಿದೆ. 


COMMERCIAL BREAK
SCROLL TO CONTINUE READING

ಚಂದ್ರಾಲೇಔಟ್ ಬಳಿಯ ಗಂಗೊಂಡನಹಳ್ಳಿ ಆಂಜನೇಯ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಮೊಹಮ್ಮದ್ ಎಂಬುವವರು ಇಂದು ಬೆಳಿಗ್ಗೆ ಟೀ ಮಾಡಲೆಂದು ಸ್ಟೌವ್ ಆನ್ ಮಾಡಿ ಬಳಿಕ ಅದನ್ನು ಆಫ್ ಮಾಡಲು ಮರೆತಿದ್ದರು. ನಂತರ ಸಿಲಿಂಡರ್ (Cylinder) ಪಕ್ಕದಲ್ಲೇ ನಿಂತು ಸಿಗರೇಟ್ ‌ಸೇದುತ್ತಿದ್ದ ವೇಳೆ ಸಿಲಿಂಡರ್ ಗೆ ಬೆಂಕಿ ತಗಲಿ ಸಿಲಿಂಡರ್ ಬ್ಲಾಸ್ಟ್ (Cylinder Blast) ಆಗಿದೆ ಎನ್ನಲಾಗಿದೆ.


ಇದನ್ನೂ ಓದಿ- Breaking News: ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ 8 ಮಂದಿ ದುರ್ಮರಣ!


ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಕಾರ್ಯ ಆರಂಭಿಸಿದ ಅಗ್ನಿಶಾಮಕ ಸಿಬ್ಬಂದಿ ಮೊಹಮ್ಮದ್ ಅವರನ್ನು ರಕ್ಷಿಸಿ ಆಸ್ಪತ್ರೆಗೆ (Hospital) ದಾಖಲಿಸಿದ್ದಾರೆ.


ಇದನ್ನೂ ಓದಿ- ಈ ಊರಲ್ಲೊಂದು ವಿಲಕ್ಷಣ ಸಂಪ್ರದಾಯ: 20ಕ್ಕೂ ಹೆಚ್ಚು ಕುರಿಗಳ ಕತ್ತು ಕಚ್ಚಿ ರಕ್ತ ಕುಡಿದ ಅರ್ಚಕ


ಈ ದುರ್ಘಟನೆಯಲ್ಲಿ ಮೊಹಮ್ಮದ್ ಅವರಿಗೆ ಗಂಭೀರ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಘಟನೆ ಕುರಿತಂತೆ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.