ಕೇರಳ ಗುಡ್ಡ ಕುಸಿತದಲ್ಲಿ 7 ಮಂದಿ ಕನ್ನಡಿಗರ ಮರಣ: ಶವಗಳ ಪತ್ತೆಗಾಗಿ ಮುಂದುವರೆದ ಶೋಧಕಾರ್ಯ
Landslide in Wayanad: ಕೇರಳ ಗುಡ್ಡ ಕುಸಿತ ಪ್ರಕರಣದಲ್ಲಿ ಸಿಲುಕಿರುವ ಕನ್ನಡಿಗರ ಗುರುತು ಪತ್ತೆ ಮತ್ತು ರಕ್ಷಣಾ ಕಾರ್ಯವನ್ನು ತೀವ್ರವಾಗಿ ನಡೆಸಲಾಗುತ್ತಿದ್ದು ಆಸ್ಪತ್ರೆ ಮತ್ತು ಕಾಳಜಿ ಕೇಂದ್ರಗಳಿಗೆ ತಹಶಿಲ್ದಾರ್ ಗಳ ತಂಡ ಭೇಟಿ ನೀಡುತ್ತಿದ್ದಾರೆ.
Kerala Landslide: ಕೇರಳ ಗುಡ್ಡ ಕುಸಿತದಲ್ಲಿ ಚಾಮರಾಜನಗರದ ಮೂಲದ ನಾಲ್ವರು, ಮಂಡ್ಯ ಜಿಲ್ಲೆಯ ಮೂವರು ಸೇರಿದಂತೆ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ. ಐದು ಜನರ ಶವ ಪತ್ತೆಯಾಗಿದ್ದು, ಇನ್ನುಳಿದ ಇಬ್ಬರ ಶವಾಕ್ಕಾಗಿ ಶೋಧಕಾರ್ಯ ಮುಂದುವರೆದಿದೆ.
ಕೇರಳ ಗುಡ್ಡ ಕುಸಿತ (Kerala Landslide) ಪ್ರಕರಣದಲ್ಲಿ ಸಿಲುಕಿರುವ ಕನ್ನಡಿಗರ ಗುರುತು ಪತ್ತೆ ಮತ್ತು ರಕ್ಷಣಾ ಕಾರ್ಯವನ್ನು ತೀವ್ರವಾಗಿ ನಡೆಸಲಾಗುತ್ತಿದ್ದು ಆಸ್ಪತ್ರೆ ಮತ್ತು ಕಾಳಜಿ ಕೇಂದ್ರಗಳಿಗೆ ತಹಶಿಲ್ದಾರ್ ಗಳ ತಂಡ ಭೇಟಿ ನೀಡುತ್ತಿದ್ದಾರೆ.
[[{"fid":"427643","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]
ಚಾಮರಾಜನಗರ ತಹಸಿಲ್ದಾರ್ ಗಿರಿಜಮ್ಮ ಮತ್ತು ಗುಂಡ್ಲುಪೇಟೆ ತಹಸಿಲ್ದಾರ್ ರಮೇಶ್ ಬಾಬು ತಂಡಗಳು ಪ್ರತ್ಯೇಕವಾಗಿ ವೈತ್ರಿ ತಾಲೂಕು ಕೇಂದ್ರ ಮತ್ತು ಇತರೆ ಕಡೆ ತೆರೆದಿರುವ ಕಾಳಜಿ ಕೇಂದ್ರಗಳು, ಆಸ್ಪತ್ರೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಇದನ್ನೂ ಓದಿ- ಕೇರಳ ಗುಡ್ಡ ಕುಸಿತ ; ಕನ್ನಡಿಗರ ರಕ್ಷಣೆಗೆ ತೆರಳಿದ ಸಚಿವ ಸಂತೋಷ್ ಲಾಡ್
ಚಾಮರಾಜನಗರ (Chamarajanagar) ಸೇರಿದಂತೆ ಕರ್ನಾಟಕದವರ ಗುರುತು ಪತ್ತೆ ಹಾಗೂ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದವರ ವಿಚಾರಣೆ ನಡೆಸುತ್ತಿದ್ದು ಬತ್ತೇರಿಯಲ್ಲಿ ಎರಡು ಬಸ್ ಗಳನ್ನು ನಿಯೋಜನೆ ಮಾಡಲಾಗಿದೆ.
[[{"fid":"427646","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"2":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"2"}}]]
ಸಂಜೆ ಹೊತ್ತಿಗೆ ಕನ್ನಡಿಗರನ್ನು ಕರೆತರುವ ನೀರಿಕ್ಷೆ ಇದ್ದು ಎಲ್ಲರನ್ನೂ ಒಟ್ಟು ಮಾಡಿ ಕರೆತರಲು ನಿರಂತರ ಮಳೆ ಅಡ್ಡಿಯಾಗಿದೆ. ಭೂ ಕುಸಿತದಲ್ಲಿ ನಾಪತ್ತೆಯಾಗಿದ್ದ ರಾಜನ್ ಮತ್ತು ರಜಿನಿ ಮೃತಪಟ್ಟಿರುವ ಸಾಧ್ಯತೆ ಹೆಚ್ಚಿದ್ದು ಇವರ ಶವ ಇನ್ನಷ್ಟೇ ಪತ್ತೆಯಾಗಬೇಕಿದೆ.
[[{"fid":"427647","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"3":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"3"}}]]
ಇದನ್ನೂ ಓದಿ- ಸಾವನ್ನಪ್ಪಿದವರ ಸಂಖ್ಯೆ 106ಕ್ಕೇರಿಕೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ!
ಹಸುವಿನ ಚೀರಾಟದಿಂದ ಎಚ್ಚರಗೊಂಡು ಪಾರಾದ ಚಾಮರಾಜನಗರದ ವಿನೋದ್, ಗೌರಮ್ಮ ಕುಟುಂಬವು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದು ಇವರನ್ನು ತಹಸಿಲ್ದಾರ್ ಗಳ ತಂಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ. ಮಹೇಶ್, ರತ್ನಮ್ಮ ಎಂಬವರು ಕೂಡ ಪಾರಾಗಿದ್ದು ಇವರನ್ನು ಅಧಿಕಾರಿಗಳ ತಂಡ ಭೇಟಿ ಮಾಡಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.