ಮರುಕಳಿಸಿದ ಪ್ರಕರಣ: ಟೊಮೊಟೊ ಬಾತ್ ಸೇವಿಸಿ ಮೊರಾರ್ಜಿ ಶಾಲೆಯ 7 ವಿದ್ಯಾರ್ಥಿಗಳು ಅಸ್ವಸ್ಥ
ಹೊಟ್ಟೆ ನೋವಿನಿಂದ ಬಳಲಿ ಅಸ್ವಸ್ಥರಾಗಿದ್ದ ವಿದ್ಯಾರ್ಥಿನಿಯರನ್ನು ಕೂಡಲೇ ಹೊರೆಯಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊರೆಯಾಲ ಆಸ್ಪತ್ರೆಯ ವೈದ್ಯರಾದ ಡಾ. ದೀಪಕ್ ಅಸ್ವಸ್ಥ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ.
ಚಾಮರಾಜನಗರ: ಮೊರಾರ್ಜಿ ವಸತಿ ಶಾಲೆಗಳ ಅವ್ಯವಸ್ಥೆ ಮತ್ತೇ ಬಟಾಬಯಲಾಗಿದ್ದು ಟೊಮೆಟೊ ಬಾತ್ ಸೇವಿಸಿ ಏಳು ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಧ ಘಟನೆ ಗುಂಡ್ಲುಪೇಟೆ ತಾಲೂಕಿನ ಗರಗನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ಇಂದು ಬೆಳಗಿನ ತಿಂಡಿ ಟೊಮೆಟೊ ಬಾತ್ ಅನ್ನು ಸೇವಿಸಿದ್ದ ವರ್ಣಿತ(13), ಹರ್ಷಿತಾ(13), ಪ್ರಿಯ(13), ರಚನಾ(15), ಸಂಜನಾ(15), ಸಂಗೀತ (13), ಪ್ರಜ್ವಲ್(15) ಎಂಬ ಏಳು ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ಉರಿ, ವಾಂತಿ ಕಾಣಿಸಿಕೊಂಡಿದೆ.
ಇದನ್ನೂ ಓದಿ- ಬಳ್ಳಾರಿ ಜಿಲ್ಲೆಯಾದ್ಯಂತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆ ರಜೆ ಘೋಷಣೆ
ಹೊಟ್ಟೆ ನೋವಿನಿಂದ ಬಳಲಿ ಅಸ್ವಸ್ಥರಾಗಿದ್ದ ವಿದ್ಯಾರ್ಥಿಗಳನ್ನು ಕೂಡಲೇ ಹೊರೆಯಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊರೆಯಾಲ ಆಸ್ಪತ್ರೆಯ ವೈದ್ಯರಾದ ಡಾ. ದೀಪಕ್ ಅಸ್ವಸ್ಥ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ.
ಈ ಏಳು ಮಂದಿ ವಿದ್ಯಾರ್ಥಿಗಳಲ್ಲಿ 15 ವರ್ಷದ ಪ್ರಜ್ವಲ್ ಎಂಬ ವಿದ್ಯಾರ್ಥಿಗೆ ಅತಿಯಾದ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಹೊರೆಯಾಲ ಆಸ್ಪತ್ರೆಯಿಂದ ಬೇಗೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ: ಪ್ರೌಢಶಾಲೆಗಳಿಗೆ ರಜೆ
ಮರುಕಳಿಸಿದ ಅಸ್ವಸ್ಥ ಪ್ರಕರಣ:
ಕೆಲ ದಿನಗಳ ಹಿಂದೆಯಷ್ಟೇ ಗುಂಡ್ಲುಪೇಟೆ ತಾಲೂಕಿನ ಯಡನವಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಚಿಕನ್ ತಿಂದು 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಈಗ ಅದೇ ಯಡವನಹಳ್ಳಿ ಕ್ಯಾಂಪಸ್ ನಲ್ಲಿರುವ ಗರಗನಹಳ್ಳಿ ಶಾಲೆಯಲ್ಲಿ ಈಗ 7 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವುದು ಮೊರಾರ್ಜಿ ದೇಸಾಯಿ ಶಾಲೆಯ ಅವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ.
ಇನ್ನೂ ಪ್ರಕರಣಕ್ಕೆ ಸಂಬಂಧಿಸಿಡಾಂಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಲೋಕೇಶ್ ಹಾಗೂ ಬೇಗೂರು ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಮಾಹಿತಿ ಕಲೆಹಾಕುತ್ತಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.