ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳ ಕರೆ

ಕರ್ನಾಟಕ ವಿರೋಧಿ ಮತ್ತು ಕನ್ನಡ ವಿರೋಧಿ ಚಟುವಟಿಕೆಗಳಲ್ಲಿ ಪದೇ ಪದೇ ತೊಡಗಿಸಿಕೊಂಡಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕರ್ನಾಟಕದಲ್ಲಿ ಸಂಪೂರ್ಣ ನಿಷೇಧಿಸಬೇಕೆಂದು ಒತ್ತಾಯಿಸಿ ಹಲವಾರು ಕನ್ನಡ ಪರ ಸಂಘಟನೆಗಳು ಮತ್ತು ಸಾರಿಗೆ ಒಕ್ಕೂಟಗಳು ಡಿಸೆಂಬರ್ 31 ರಂದು ಒಂದು ದಿನದ ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

Written by - Zee Kannada News Desk | Last Updated : Dec 22, 2021, 05:25 PM IST
  • 'ಇತ್ತೀಚಿನ ದಿನಗಳಲ್ಲಿ. ಕರ್ನಾಟಕದಲ್ಲಿ ಎಂಇಎಸ್ ಸಂಘಟನೆಯ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸುವಂತೆ ಒತ್ತಾಯಿಸಿ ಸಂಘಟನೆಗಳು ಡಿಸೆಂಬರ್ 29 ರವರೆಗೆ ಗಡುವು ನೀಡಿವೆ.
  • ಈ ಬಂದ್ ಗೆ ಸುಮಾರು 35 ಸಂಘಟನೆಗಳು ಬೆಂಬಲ ನೀಡಿವೆ.
ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳ ಕರೆ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ವಿರೋಧಿ ಮತ್ತು ಕನ್ನಡ ವಿರೋಧಿ ಚಟುವಟಿಕೆಗಳಲ್ಲಿ ಪದೇ ಪದೇ ತೊಡಗಿಸಿಕೊಂಡಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕರ್ನಾಟಕದಲ್ಲಿ ಸಂಪೂರ್ಣ ನಿಷೇಧಿಸಬೇಕೆಂದು ಒತ್ತಾಯಿಸಿ ಹಲವಾರು ಕನ್ನಡ ಪರ ಸಂಘಟನೆಗಳು ಮತ್ತು ಸಾರಿಗೆ ಒಕ್ಕೂಟಗಳು ಡಿಸೆಂಬರ್ 31 ರಂದು ಒಂದು ದಿನದ ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

'ಇತ್ತೀಚಿನ ದಿನಗಳಲ್ಲಿ. ಕರ್ನಾಟಕದಲ್ಲಿ ಎಂಇಎಸ್ ಸಂಘಟನೆಯ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸುವಂತೆ ಒತ್ತಾಯಿಸಿ ಸಂಘಟನೆಗಳು ಡಿಸೆಂಬರ್ 29 ರವರೆಗೆ ಗಡುವು ನೀಡಿವೆ.ಈ ಬಂದ್ ಗೆ ಸುಮಾರು 35 ಸಂಘಟನೆಗಳು ಬೆಂಬಲ ನೀಡಿವೆ.

ಇದನ್ನೂ ಓದಿ: ‘ಅಧಿಕಾರ ಯಾವುದೂ ಶಾಶ್ವತವಲ್ಲ’: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಬೊಮ್ಮಾಯಿ..?

"ರಾಜ್ಯ ಸರ್ಕಾರವು ಡಿಸೆಂಬರ್ 29 ರೊಳಗೆ ನಿಷೇಧಕ್ಕೆ ಆದೇಶಿಸದಿದ್ದರೆ ಡಿಸೆಂಬರ್ 31 ರಂದು ನಾವು ಕರ್ನಾಟಕ ಬಂದ್‌ಗೆ ಮುಂದಾಗುತ್ತೇವೆ" ಎಂದು ಮಾಜಿ ಶಾಸಕ ಹಾಗೂ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು. 

"ಕರ್ನಾಟಕ ಮತ್ತು ಕನ್ನಡದ ಹಿತದೃಷ್ಟಿಯಿಂದ ಎಲ್ಲರೂ ನಮ್ಮ ಕರೆಯನ್ನು ಬೆಂಬಲಿಸಲು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಬರಲು ನಾವು ವಿನಂತಿಸುತ್ತೇವೆ. ನಾವು ಯಾರಿಂದಲೂ ಯಾವುದೇ ನೈತಿಕ ಅಥವಾ ವರ್ಚುವಲ್ ಬೆಂಬಲವನ್ನು ಬಯಸುವುದಿಲ್ಲ ಆದರೆ ಬಂದ್ ದಿನದಂದು ನಮ್ಮೊಂದಿಗೆ ಸೇರುವ ಮೂಲಕ ನಮಗೆ ನಿಜವಾದ ಬೆಂಬಲ ಬೇಕು.ಇದು ಸಂಪೂರ್ಣವಾಗಿ ಅರಾಜಕೀಯ ಮತ್ತು ರಾಜ್ಯದ ಹಿತದೃಷ್ಟಿಯಿಂದ ಕೂಡಿರುತ್ತದೆ ಎಂದು ವಾಟಾಳ್ ನಾಗರಾಜ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. 

ಇದನ್ನೂ ಓದಿ: ಬೆಳಗಾವಿ ಸುವರ್ಣಸೌಧ ಮುತ್ತಿಗೆ ಹಾಕಲು ಹೊರಟಿದ್ದ ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಸಂಘಟಕರ ಪ್ರಕಾರ, ತುರ್ತು ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಡಿಸೆಂಬರ್ 31 ರಂದು ಸ್ಥಗಿತಗೊಳಿಸಲಾಗುವುದು.ಸಾರಿಗೆ ಸಂಸ್ಥೆಗಳು ಬಂದ್‌ಗೆ ಸಾರ್ವಜನಿಕವಾಗಿ ಬೆಂಬಲ ವ್ಯಕ್ತಪಡಿಸಿರುವುದರಿಂದ 35,000 ಕ್ಕೂ ಹೆಚ್ಚು ಆಟೋರಿಕ್ಷಾಗಳು, ಓಲಾ, ಉಬರ್ ಸೇರಿದಂತೆ 10,000 ಟ್ಯಾಕ್ಸಿಗಳು ರಸ್ತೆಯಿಂದ ಹೊರಗುಳಿಯಲಿವೆ ಎಂದು ಮೂಲಗಳು ತಿಳಿಸಿವೆ. 

ಕರ್ನಾಟಕ ಬಂದ್‌ಗೆ 35ಕ್ಕೂ ಹೆಚ್ಚು ಕನ್ನಡ ಮತ್ತು ಸಾರಿಗೆ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದರೆ, ಟಿ.ಎ.ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಬಂದ್‌ನಿಂದ ದೂರ ಉಳಿದಿದೆ.ಈ ವಿಚಾರವಾಗಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿರುವ ನಾರಾಯಣ ಗೌಡ ಅವರು, ನಮ್ಮ ಪ್ರತಿಭಟನೆಯನ್ನು ದಾಖಲಿಸಲು ಇನ್ನೂ ಹಲವಾರು ವಿಧಾನಗಳಿವೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಇದನ್ನೂ ಓದಿ: ಎಂಇಎಸ್ ವಿರುದ್ಧ ಈ ಬಾರಿ ನಿರ್ಣಾಯಕ ಕ್ರಮ: ಗುಡುಗಿದ ಸಿಎಂ ಬೊಮ್ಮಾಯಿ

ಬಂದ್ ಆಚರಿಸುವುದೊಂದೇ ಪರಿಹಾರವಲ್ಲ. ಈಗಾಗಲೇ ಮಹಾಮಾರಿಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಮ್ಮ ವಿರೋಧವನ್ನು ವ್ಯಕ್ತಪಡಿಸಲು ಇನ್ನೂ ಹಲವಾರು ಮಾರ್ಗಗಳಿವೆ" ಎಂದು ನಾರಾಯಣ್ ಗೌಡರು ಸ್ಪಷ್ಟಪಡಿಸಿದರು. 

ಆದರೆ, ಕರ್ನಾಟಕದಲ್ಲಿ ಎಂಇಎಸ್ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಬೇಕು ಎಂಬ ಬೇಡಿಕೆಗೆ ಬೆಂಬಲ ನೀಡುವುದಾಗಿ ಹಾಗೂ ಡಿಸೆಂಬರ್ 31ರಂದು ಕರ್ನಾಟಕದಾದ್ಯಂತ ವಿವಿಧ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ  ನಾರಾಯಣಗೌಡ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News