ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ರಿಲೀಸ್ ಆಗಿದ್ದು, ಫುಲ್ ವೈರಲ್ ಆಗುತ್ತಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಕಬ್ಬನ್ ಪಾರ್ಕ್‌ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇನ್ನು ಈ ಸಿ.ಡಿ. ರಾಜ್ಯ ರಾಜಕಾರಣದಲ್ಲಿ ಸಂಚನ ಮೂಡಿಸಿದೆ. ಸಿಡಿ ಪ್ರಕರಣದ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ(Ramesh Jarkiholi) ರಾಜೀನಾಮೆ ನೀಡಿದ್ದಾರೆ.


Ramesh Jarakiholi : ರಾಸಲೀಲೆ ಪ್ರಕರಣದಲ್ಲಿ ಮಹತ್ವದ ತಿರುವು, ರಮೇಶ್ ಜಾರಕಿಹೊಳಿ ರಾಜೀನಾಮೆ


ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ(BS Yediyurappa)ರಿಗೆ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ.


ಸಾಹುಕಾರರ' ಸರಸ ಸಿಡಿ..! ಪ್ರತಿಪಕ್ಷಗಳ ಕೈಗೆ ಬ್ರಹ್ಮಾಸ್ತ್ರ, ಮುಖ್ಯಮಂತ್ರಿ ಮೇಲೆ ಒತ್ತಡ


ರಾಜೀನಾಮೆ ಪತ್ರ(Resign Letter)ದಲ್ಲಿ ಅವರು ನನ್ನ ಮೇಲೆ ಬಂದಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಈ ಬಗ್ಗೆ ಶೀಃಘ್ರದಲ್ಲೇ ತನಿಖೆಯಾಗಬೇಕು, ನಾನು ನಿರ್ದೋಶಿಯಾಗುವ ವಿಶ್ವಾಸವಿದ್ದರೂ ಕೂಡ ನೈತಿಕ ಹೊಣೆಯನ್ನು ಹೊತ್ತು ನಾನು ನನ್ನ ಸಚಿವ ಸಂಪುಟ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿರುತ್ತೇನೆ. ದಯವಿಟ್ಟು ಇದನ್ನು ಅಂಗೀಕರಿಸುವಂತೆ ಸಿಎಂ ಬಿಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.


'ಅದು ಫೇಕ್ ವಿಡಿಯೋ ಯಾಕೆ ರಾಜೀನಾಮೆ ನೀಡಬೇಕು?’


ಇನ್ನು ರಾಜೀನಾಮೆಯನ್ನು ಅಂಗೀಕರಿಸದಂತೆ ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಅಭಿಮಾನಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಅಲ್ಲದೇ ಬೆಳಗಾವಿ ಬಂದ್ ಮಾಡುವ ಎಚ್ಚಡಿಕೆಯನ್ನೂ ಸಹ ಕೊಟ್ಟಿದ್ದಾರೆ.


Ramesh Jarkiholi: ಸಾಹುಕಾರನ ರಾಸಲೀಲೆ: ವಿಡಿಯೋ ಶೂಟ್ ಆಗಿದ್ದು ದೆಹಲಿಯ ಕರ್ನಾಟಕ ಭವನದಲ್ಲಿ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.