ಬೆಂಗಳೂರು: ದೆಹಲಿಯಲ್ಲಿ ಐದು ವರ್ಷಗಳ ಕಾಲ ಅತ್ಯಾಚಾರ ಮತ್ತು ಗುರಗ್ರಾಮ್ನಲ್ಲಿ ಏಳು ವರ್ಷದ ಬಾಲಕ ಪ್ರದ್ಯುಮ್ಯನ ನ ಹತ್ಯೆ ಪ್ರಕರಣದ ನಂತರ ಈಗ ಬೆಂಗಳೂರಿನಲ್ಲಿ ಮುಗ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂಬ ಸುದ್ದಿ ಎಲ್ಲರನ್ನೂ ಬೆಚ್ಚಿ ಬಿಳಿಸಿದೆ. 


COMMERCIAL BREAK
SCROLL TO CONTINUE READING

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಎಲ್.ಕೆ.ಜಿ ಯಲ್ಲಿ ಅಧ್ಯಯನ ಮಾಡುತ್ತಿರುವ ನಾಲ್ಕು ವರ್ಷದ ಬಾಲಕಿಯ ಮೇಲೆ ಶಾಲಾ ಸಿಬ್ಬಂದಿಯಿಂದಲೇ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾಗಿದೆ. 


ಬಾಲಕಿಯು ಶಾಲೆಯಿಂದ ಮನೆಗೆ ಬಂದಾಗ ತನ್ನ ಗುಪ್ತಾಂಗದಲ್ಲಿ ನೋವು ಇರುವ ಬಗ್ಗೆ ಪೋಷಕರಿಗೆ ತಿಳಿಸಿದಾಗ, ಪೋಷಕರು ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. 


ಖಾಸಗಿ ಆಸ್ಪತ್ರೆಯಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯರು ಮುಗ್ಧ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ವೈದ್ಯಕೀಯವಾಗಿ ದೃಢಪಡಿಸಲಾಗಿದೆ. ನಡೆದಿರುವ ದುಷ್ಕೃತ್ಯದ ಬಗ್ಗೆ ಪೋಷಕರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಎಲ್ಲಾ ಐದು ಭದ್ರತಾ ಸಿಬ್ಬಂದಿಯನ್ನೂ ಬಂಧಿಸಿದ್ದು ತನಿಖೆ ನಡೆಸುತ್ತಿದ್ದಾರೆ.