ಮಂಡ್ಯ: ಹೆಣ್ಣು ಮಕ್ಕಳ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ವಸತಿ ಶಾಲೆಯ ಉಸ್ತುವಾರಿ ಶಿಕ್ಷಕನ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿನಿಯರು, ಆತನಿಗೆ ಧರ್ಮದೇಟು ನೀಡಿರುವ ಘಟನೆ ಪಾಂಡವಪುರ ತಾಲೂಕಿನಲ್ಲಿ ಕಟ್ಟೇರಿ ಗ್ರಾಮದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಪಾಂಡವಪುರ ತಾಲೂಕಿನಲ್ಲಿ ಕಟ್ಟೇರಿ ಗ್ರಾಮದ ಫ್ರೌಡಶಾಲಾ ಹೆಣ್ಣು ಮಕ್ಕಳ ವಸತಿ ನಿಲಯದಲ್ಲಿ ವಸತಿ ಶಾಲೆಯ ಉಸ್ತುವಾರಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕ ಚಿನ್ಮಯಾನಂದ, ಹಾಸ್ಟೆಲ್ ವಿದ್ಯಾರ್ಥಿನಿಯರ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಮಾತ್ರವಲ್ಲ, ಅವರಿಗೆ ಲೈಂಗಿಕ ಕಿರುಕುಳವನ್ನೂ ನೀಡುತ್ತಿದ್ದ ಎಂದು ತಿಳಿದುಬಂದಿದೆ.


ಇದನ್ನೂ ಓದಿ- ವಿದ್ಯಾರ್ಥಿಗಳ ಗಮನಕ್ಕೆ : ಡಿಗ್ರಿ, ಪಿ.ಜಿ.ಗಳಲ್ಲಿ ಕನ್ನಡ, ಇಂಗ್ಲಿಷ್‌ ಎರಡರಲ್ಲೂ ಉತ್ತರ ಬರೆಯಲು ಅವಕಾಶ


ಕಾಮುಕ ಶಿಕ್ಷಕನಿಗೆ ದೊಣ್ಣೆ, ಪೊರಕೆ ಏಟು:
ಈ ಕಾಮುಕ ಶಿಕ್ಷಕ ನಿನ್ನೆ (ಬುಧವಾರ) ರಾತ್ರಿ ಕೂಡ ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿಯರ  ಜೊತೆಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಈತನ ವರ್ತನೆಯಿಂದ ಬೇಸತ್ತು ರೊಚ್ಚಿಗೆದ್ದಿದ್ದ ವಿದ್ಯಾರ್ಥಿನಿಯರು ಕಾಮುಕ ಶಿಕ್ಷಕ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಿಸುತ್ತಿದ್ದಂತೆ ಮುಂದಿನ ಗೇಟ್ ಬಂದ್ ಮಾಡಿ ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಪೊರಕೆ, ದೊಣ್ಣೆಯಿಂದ ಆತನನ್ನು ಮನಬಂದಂತೆ ಥಳಿಸಿ, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರ.


ಇದನ್ನೂ ಓದಿ- ನೂತನ ತಂತ್ರಜ್ಞಾನದ ಮೂಲಕ ರಸ್ತೆ ಡಾಂಬರೀಕರಣ: ದೇಶದಲ್ಲೇ ಇದೇ ಮೊದಲು


ಇನ್ನು  ಫ್ರೌಡಶಾಲಾ ಹೆಣ್ಣು ಮಕ್ಕಳ ವಸತಿ ನಿಲಯದಲ್ಲಿ ವಸತಿ ಶಾಲೆಯ ಉಸ್ತುವಾರಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕನ ಅಸಭ್ಯ ವರ್ತನೆ ಬಗ್ಗೆ ವಿದ್ಯಾರ್ಥಿನಿಯರು ನೀಡಿದ ದೂರಿನ ಮೇರೆಗೆ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕೆಆರ್ಎಸ್ ಪೊಲೀಸರು ಆರೋಪಿ ಕಾಮುಕ ಶಿಕ್ಷಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.