ಲೈಂಗಿಕ ದೌರ್ಜನ್ಯ ಆರೋಪ: ಇಂದು ಮುರುಘಾ ಶ್ರೀಗಳಿಗೆ ಮೆಡಿಕಲ್ ಟೆಸ್ಟ್ ಸಾಧ್ಯತೆ!
ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆ ಮೈಸೂರಿನಿಂದ ಚಿತ್ರದುರ್ಗದ ಬಾಲಮಂದಿರಕ್ಕೆ ಸಂತ್ರಸ್ತ ವಿದ್ಯಾರ್ಥಿನಿಯರನ್ನು ಶಿಫ್ಟ್ ಮಾಡಲಾಗಿದೆ.
ಚಿತ್ರದುರ್ಗ: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರೋ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರಿಗೆ ಇಂದು ಮೆಡಿಕಲ್ ಟೆಸ್ಟ್ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ. ಚಿತ್ರದುರ್ಗದ ಮುರುಘಾ ಮಠದ ಶಾಲೆಯಲ್ಲಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ದೂರು ದಾಖಲಾಗಿದ್ದು, ಈ ಬಗ್ಗೆ ಈಗಾಗಲೇ ಪೋಕ್ಸೋ ಕಾಯ್ದೆಯಡಿ ಎಫ್‍ಐಆರ್ ದಾಖಲಾಗಿದೆ.
ಇದನ್ನೂ ಓದಿ: ಚಿತ್ರದುರ್ಗದ ಮಠದ ಮುರುಘಾಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಫ್ಐಆರ್ ದಾಖಲು!
ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆ ಮೈಸೂರಿನಿಂದ ಚಿತ್ರದುರ್ಗದ ಬಾಲಮಂದಿರಕ್ಕೆ ಸಂತ್ರಸ್ತ ವಿದ್ಯಾರ್ಥಿನಿಯರನ್ನು ಶಿಫ್ಟ್ ಮಾಡಲಾಗಿದೆ. ಭಾನುವಾರ(ಆ.28) ಬೆಳಗಿನ ಜಾವ 3.30ಕ್ಕೆ ಪೊಲೀಸ್ ಬಿಗಿ ಭದ್ರತೆಯಲ್ಲಿ ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ಕಚೇರಿ ಬಳಿಯ ಬಾಲಮಂದಿರಕ್ಕೆ ವಿದ್ಯಾರ್ಥಿನಿಯರು ಆಗಮಿಸಿದ್ದಾರೆ.
ಇಂದು ಸಿಡಬ್ಲುಸಿ ಮುಂದೆ ಈ ವಿದ್ಯಾರ್ಥಿನಿಯರು ಹಾಜಾರಾಗಲಿದ್ದು, ಬಳಿಕ ಅವರಿಗೆ ಮೆಡಿಕಲ್ ಟೆಸ್ಟ್ ನಡೆಸಲಾಗುತ್ತದೆ. ಸಿಡಬ್ಲುಸಿ ಮುಂದೆ ಮಕ್ಕಳು ಹೇಳಿಕೆ ನೀಡಿದ ಬಳಿಕ ಪ್ರಕರಣಕ್ಕೆ ಟ್ವಿಸ್ಟ್ ಸಿಗುವ ಸಾಧ್ಯತೆ ಇದೆ. ಮೈಸೂರಿನಲ್ಲಿ ಹಾಗೂ ಚಿತ್ರದುರ್ಗದಲ್ಲಿನ ಹೇಳಿಕೆ ಒಂದೇ ಆದಲ್ಲಿ ಶ್ರೀಗಳನ್ನು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಇದರ ನಂತರ ಮುರುಘಾ ಶ್ರೀಗಳನ್ನು ಮೆಡಿಕಲ್ ಟೆಸ್ಟ್ ಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ: ಅಧಿಕೃತವಾಗಿ ಲೋಕಾಯುಕ್ತ ಕಾರ್ಯಾರಂಭ: ದೂರು ಸ್ವೀಕರಿಸಿ ತನಿಖೆ ನಡೆಸಲು ಆದೇಶ!
ತಮ್ಮ ವಿರುದ್ಧದ ಆರೋಪಕ್ಕೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದ ಶ್ರೀಗಳು, ‘ನಾವು ಸಂದಾನಕ್ಕೂ ಸಿದ್ಧ ಸಮರಕ್ಕೂ ಬದ್ದರಿದ್ದೇವೆ. ಸಂದಾನ ಮತ್ತೆ ಸಮರ ಎರಡೂ ಆಯ್ಕೆಗಳು ಇವೆ. ಸಂದಾನ ನೀವು ಮಾಡಿ, ಒಂದು ವೇಳೆ ಅದು ಫೇಲ್ ಆದರೆ ಸಮರ ಇದ್ದೇ ಇದೆ. ನಮ್ಮ ಪಕ್ಕದಲ್ಲೇ ಇದ್ದು ಹೋದವರೇ ಈ ರೀತಿ ಪಿತೂರಿ, ಒಳಸಂಚು ಮಾಡಿದ್ದಾರೆ’ ಎಂದು ಕಿಡಿಕಾರಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.