Muruga Mutt Seer case: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಬೃಹತ್ ಪ್ರತಿಭಟನೆ

ಚಿತ್ರದುರ್ಗ ಮುರಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Written by - Sowmyashree Marnad | Edited by - Puttaraj K Alur | Last Updated : Sep 2, 2022, 04:32 PM IST
  • ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ
  • ಚಿತ್ರದುರ್ಗದ ಮುರಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಬೃಹತ್ ಪ್ರತಿಭಟನೆ
  • ಮುರುಘಾ ಶ್ರೀಗಳ ವಿರುದ್ಧ ಕಠಿಣ ಕ್ರಮಕ್ಕೆ ವಿವಿಧ ಸಂಘಟನೆಗಳ ಆಗ್ರಹ
Muruga Mutt Seer case: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಬೃಹತ್ ಪ್ರತಿಭಟನೆ  title=
ಮುರುಘಾ ಶ್ರೀಗಳ ವಿರುದ್ಧ ಪ್ರತಿಭಟನೆ

ಬೆಂಗಳೂರು: ಚಿತ್ರದುರ್ಗದ ಪ್ರತಿಷ್ಠಿತ ಮುರಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಗುರಿಯಾಗಿ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗ ಮುರಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಬಿಲ್ಕಿಸ್ ಬಾನು ಪ್ರಕರಣದಲ್ಲಿ ಬಿಡುಗಡೆ ಆಗಿರುವ ಆರೋಪಿಗಳನ್ನು ಕೊಡಲೇ ಬಂಧಿಸಬೇಕು ಮತ್ತು ರಾಜಸ್ಥಾನದಲ್ಲಿ ಬಾಲಕನ ಹತ್ಯೆ ಮಾಡಿದವರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಜನವಾದಿ ಮಹಿಳಾ ಸಂಘ ಹಾಗೂ ಸಾಮೂಹಿಕ ಸಂಘಟನೆಗಳ ವೇದಿಕೆ, ದಸಂಸ, ರಾಜ್ಯ ಮಹಿಳಾ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು  ಪ್ರತಿಭಟನೆ ನಡೆಸಿದವು.

ಇದನ್ನೂ ಓದಿMuruga Mutt case: ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಮುರುಘಾ ಶ್ರೀ ಶಿಫ್ಟ್!

ದಲಿತ ಮುಖಂಡ ಮಾವಳ್ಳಿ ಶಂಕರ್ ಮಾತನಾಡಿ, ‘ದುರ್ಬಲರ ಪರವಾಗಿ ಇರಬೇಕಾದ ಸರ್ಕಾರ ಮಠ, ರಾಜಕೀಯದ ಪರವಾಗಿದೆ. ಸಂವಿಧಾನವನ್ನು ದಿಕ್ಕರಿಸುವ ರೀತಿ ಸರ್ಕಾರ ನಡೆಯುತ್ತಿದೆ. ಸ್ವಾಮೀಜಿ ಪರವಾಗಿ ವಿರೋಧ ಪಕ್ಷಗಳು ಬಾಯಿಗೆ ಬೀಗ ಹಾಕಿಕೊಂಡು ಕೂತಿವೆ. ಸೂಕ್ತ ತನಿಖೆ ನಡೆಯಬೇಕು. ಈ ವಿಚಾರಣೆಯನ್ನು ಹೊರ ರಾಜ್ಯಕ್ಕೆ ವರ್ಗಾಯಿಸಬೇಕು’ ಎಂದರು.  ‘ಮುರುಘಾ ಮಠದ ಶ್ರೀಗಳು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿರೋದು ನಾವೆಲ್ಲ ತಲೆ ತಗ್ಗಿಸುವಂತಹ ಕೆಲಸ. ಪ್ರಧಾನಿ ಮೋದಿ ಮತ್ತು ಬಿಜೆಪಿ ಸರ್ಕಾರದಲ್ಲಿ ಕೋಮುವಾದವನ್ನು ಹಿಮ್ಮೆಟ್ಟಿಸುವ ಕೆಲಸ ನಡೆಯಬೇಕಾಗಿದೆ. ಒಂದು ವ್ಯಕ್ತಿಯ ವಿರುದ್ಧ ಮಾಡುವ ಬದಲು, ಅತ್ಯಾಚಾರ, ಶೋಷಣೆ, ಕೋಮುವಾದ ವಿರುದ್ಧವಾಗಿ ನಮ್ಮ ಹೋರಾಟ ನಡೆಯಬೇಕು’ ಎಂದು ದಲಿತ ಸಂಘರ್ಷ ಸಮಿತಿ ನಾಯಕ ಗೋಪಾಲ ಕೃಷ್ಣ ಕಿಡಿಕಾರಿದ್ದಾರೆ.

ಬಂಧನವಾದ ಕೆಲವೇ ಹೊತ್ತಿನಲ್ಲಿ ಶ್ರೀಗಳಿಗೆ ಎದೆ ನೋವು ಕಾಣಿಸಿಕೊಂಡಿರುವುದಕ್ಕೆ ಸರ್ಕಾರಿ ಖರ್ಚಿನಲ್ಲಿ ಅವರಿಗೆ ಚಿಕಿತ್ಸೆ ನೀಡುತ್ತಿರುವುದನ್ನು ಖಂಡಿಸುತ್ತೀವೆ. ಇದು ನೂರಕ್ಕೆ ನೂರರಷ್ಟು ನಾಟಕ. ಈ ವಿಚಾರದಲ್ಲಿ ಜಾಮೀನು ಸಿಗದ ರೀತಿಯಲ್ಲಿ ನಾವು ಹೋರಾಟ ನಡೆಸುತ್ತೇವೆ ಎಂದು ಚಿಂತಕಿ ವಿಮಲಾ ಇದೇ ವೇಳೆ ಹೇಳಿದರು.

ಇದನ್ನೂ ಓದಿ: Tumkur Crime News: ಪದೇ ಪದೇ ಮೂತ್ರ ಮಾಡಿದನೆಂದ ಬಾಲಕನ ಗುಪ್ತಾಂಗವನ್ನೇ ಸುಟ್ಟ ಪಾಪಿ ಶಿಕ್ಷಕಿ!

ಕನ್ನಡ-ಕಾರ್ಮಿಕ ಸಂಘಟನೆಗಳ ಹೋರಾಟದ ಕಿಚ್ಚು

ಪ್ರತಿಭಟನಾ ವೇದಿಕೆಯ ಹೊರಗೂ ಮುರುಘಾ ಮಠದ ಸ್ವಾಮಿಗಳ ವಿರುದ್ಧ ಪ್ರತಿಭಟನೆಯ ಕಿಚ್ಚು ಜೋರಾಗಿತ್ತು. ರಾಜ್ಯ ಸರ್ಕಾರದ ನಡೆ ಬಗ್ಗೆ ಕನ್ನಡ ಒಕ್ಕೂಟಗಳು, ಕಾರ್ಮಿಕ ಸಂಘಟನೆಗಳು ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದವು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News