ಬೆಳಗಾವಿಯಲ್ಲಿ 250 ಕೋಟಿ ರೂ. ಹೂಡಿಕೆಗೆ ಎಸ್‌ಎಫ್‌ಎಸ್‌ ಕಂಪನಿ ಪ್ರಸ್ತಾವನೆ : ಎಂ.ಬಿ. ಪಾಟೀಲ್‌

ಐಫೋನ್‌ ತಯಾರಿಕೆಗೆ ಬಿಡಿಭಾಗಗಳನ್ನು ತಯಾರಿಸಿ ಕೊಡುವ ಎಸ್‌ಎಫ್‌ಎಸ್‌ ಕಂಪನಿಯು ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದ್ದು, ಇದಕ್ಕಾಗಿ 30 ಎಕರೆ ಭೂಮಿಯನ್ನು ಕೇಳಿದೆ ಎಂದು ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

Written by - Prashobh Devanahalli | Edited by - Krishna N K | Last Updated : Jun 28, 2023, 07:35 PM IST
  • ಎಸ್‌ಎಫ್‌ಎಸ್‌ ಕಂಪನಿಯು ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದೆ.
  • 30 ಎಕರೆ ಭೂಮಿಯನ್ನು ಕೇಳಿದ್ದು, ಇದು ಸ್ವಾಗತಾರ್ಹ ಪ್ರಸ್ತಾವನೆಯಾಗಿದೆ.
  • ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದರು.
ಬೆಳಗಾವಿಯಲ್ಲಿ 250 ಕೋಟಿ ರೂ. ಹೂಡಿಕೆಗೆ ಎಸ್‌ಎಫ್‌ಎಸ್‌ ಕಂಪನಿ ಪ್ರಸ್ತಾವನೆ : ಎಂ.ಬಿ. ಪಾಟೀಲ್‌ title=

ಬೆಂಗಳೂರು : ಆಪಲ್ ಫೋನ್ ತಯಾರಿಸುವ ಫಾಕ್ಸ್‌ಕಾನ್‌ ಕಂಪನಿಗೆ ಬಿಡಿಭಾಗಗಳನ್ನು ತಯಾರಿಸಿ ಕೊಡುವ ಎಸ್‌ಎಫ್‌ಎಸ್‌ ಕಂಪನಿಯು ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದ್ದು, ಇದಕ್ಕಾಗಿ 30 ಎಕರೆ ಭೂಮಿಯನ್ನು ಕೇಳಿದೆ. ಇದು ಸ್ವಾಗತಾರ್ಹ ಪ್ರಸ್ತಾವನೆಯಾಗಿದ್ದು, ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ತಮ್ಮನ್ನು ಬುಧವಾರ ಭೇಟಿಯಾಗಿದ್ದ ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಫಾರಸ್ ಶಾ ನೇತೃತ್ವದ ನಿಯೋಗದ ಬೇಡಿಕೆಗಳನ್ನು ಕೇಳಿದ ಅವರು ಈ ಭರವಸೆ ನೀಡಿದ್ದಾರೆ. ಎಸ್‌ಎಫ್‌ಎಸ್‌ ಕಂಪನಿ ಈಗಾಗಲೇ ಬೆಳಗಾವಿಯಲ್ಲಿ ಏರೋಸ್ಪೇಸ್‌ ಉದ್ಯಮಕ್ಕೆ ಬೇಕಾಗುವ ಬಿಡಿಭಾಗಗಳನ್ನು ತಯಾರಿಸುತ್ತಿದೆ. ಈಗ ಅದು ಆಪಲ್‌ ಫೋನ್‌ಗೆ ಬೇಕಾಗುವ ಬಿಡಿಭಾಗಗಳ ತಯಾರಿಕಾ ಘಟಕವನ್ನು ರಾಜ್ಯದಲ್ಲಿ ತೆರೆಯಲು ಮನಸ್ಸು ಮಾಡಿದೆ. ಇದರಿಂದ ಮುಂದಿನ ಮೂರು ವರ್ಷಗಳಲ್ಲಿ 500 ಜನ ತಂತ್ರಜ್ಞರಿಗೆ ಉದ್ಯೋಗ ಸಿಗಲಿದೆ ಎಂದು ಕಂಪನಿಯ ಪ್ರತಿನಿಧಿಗಳು ತಿಳಿಸಿದ್ದಾರೆ. ಇದರ ಜತೆಗೆ ಪರೋಕ್ಷವಾಗಿ ನೂರಾರು ಉದ್ಯೋಗಗಳು ಸೃಷ್ಟಿಯಾಗಲಿವೆ. ಇದರಿಂದ ರಾಜ್ಯದ ಆರ್ಥಿಕತೆಗೂ ಲಾಭವಾಗುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಬರೋಬ್ಬರಿ 200 ಕೋಟಿ ಮೌಲ್ಯ ದಾಟಿದ ನಾರಿಯರ ಸಂಚಾರ

ಬೆಳಗಾವಿಯನ್ನು ರಾಜ್ಯದ ಪ್ರಮುಖ ಉದ್ಯಮ ವಲಯಗಳಲ್ಲಿ ಒಂದಾಗಿ ಬೆಳೆಸಲಾಗುತ್ತಿದೆ. ಅಲ್ಲಿ ಸಂಪರ್ಕ ವ್ಯವಸ್ಥೆ ಚೆನ್ನಾಗಿದೆ. ಇದು ಮುಂಬೈ-ಬೆಂಗಳೂರು-ಚೆನ್ನೈ ಕಾರಿಡಾರ್‍‌ನಲ್ಲಿ ಬರುವುದರಿಂದ ಔದ್ಯಮಿಕ ಬೆಳವಣಿಗೆಗೆ ಅಪಾರ ಅವಕಾಶಗಳಿವೆ. ಇದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸರಕಾರವು ತೀರ್ಮಾನಿಸಿದೆ ಎಂದು ಅವರು ನುಡಿದರು. ಈ ಸಂದರ್ಭದಲ್ಲಿ ಎಸ್‌ಎಫ್‌ಎಸ್‌ ಕಂಪನಿಯ ನಿರ್ದೇಶಕ ಪ್ರಶಾಂತ್‌ ಕೋರೆ, ಕೈಗಾರಿಕಾ ಇಲಾಖೆ ಅಯುಕ್ತೆ ಗುಂಜನ್‌ ಕೃಷ್ಣ ಇದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News