12ನೇ ದಿನಕ್ಕೆ ಕಾಲಿಟ್ಟ ‘ಶಕ್ತಿ’: 139 ಕೋಟಿ ಮೌಲ್ಯ ದಾಟಿದ ಮಹಿಳಾ `ಶಕ್ತಿ` ಸಂಚಾರ!
Karnataka Shakti Scheme: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವ ‘ಶಕ್ತಿ ಯೋಜನೆ’ ಸಹ ಒಂದು. ಇದೇ ಜೂನ್ 11ರಿಂದ ಈ ಯೋಜನೆ ಜಾರಿಯಾಗಿದ್ದು, ರಾಜ್ಯದ ಎಲ್ಲಾ ಮಹಿಳೆಯರಿಗೂ ಉಚಿತ್ ಬಸ್ ಪ್ರಯಾಣದ ಅವಕಾಶ ನೀಡಲಾಗಿದೆ.
ಬೆಂಗಳೂರು: ರಾಜ್ಯದ ನಾರಿಯರ ಶಕ್ತಿ ಪ್ರದರ್ಶನ ಮುಂದುವರೆದಿದೆ. ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ಶುಕ್ರವಾರ 12ನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯದ ಮಹಿಳಾ "ಶಕ್ತಿ" ಸಂಚಾರ 139 ಕೋಟಿ ರೂ. ಮೌಲ್ಯ ದಾಟಿದೆ.
ಸಾರಿಗೆ ಬಸ್‍ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ದಿನೇ ದಿನೇ ಗಣನೀಯವಾಗಿ ಏರಿಕೆಯಾಗುತ್ತಿದೆ. ಕಳೆದ ಹನ್ನೆರಡು ದಿನಗಳಲ್ಲಿ 5,98,19,437 ಮಹಿಳಾ ಪ್ರಯಾಣಿಕರು ಸಂಚಾರ ನಡೆಸಿದ್ದಾರೆ. ‘ಶಕ್ತಿ ಯೋಜನೆ’ ಅಡಿಯಲ್ಲಿ ಜೂನ್ 22ರಂದು ಸಹ ಲಕ್ಷಾಂತರ ಮಹಿಳೆಯರು ರಾಜ್ಯದ ವಿವಿಧ ಭಾಗಗಳಿಗೆ ಸಂಚಾರ ನಡೆಸಿದ್ದಾರೆ.
ಇದನ್ನೂ ಓದಿ: ಸಾವಿಗೆ ನ್ಯಾಯ ಸಿಗದ ಹಿನ್ನಲೆ ದಯಾಮರಣಕ್ಕೆ ಅನುಮತಿ ನೀಡಿ ಎಂದು ರಾಷ್ಟ್ರಪತಿಗೆ ಪತ್ರ
ಜೂನ್ 22ರಂದು ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ವಿವರ
KSRTC - 16,93,317
ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 4,51,01,580 ರೂ. ಆಗುತ್ತದೆ
ಬಿಎಂಟಿಸಿ- 19,50,182
ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 2,44,40,307 ರೂ. ಆಗುತ್ತದೆ
ವಾಯುವ್ಯ ಸಾರಿಗೆ- 13,73,499
ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 3,32,22,638 ರೂ. ಆಗುತ್ತದೆ
ಕಲ್ಯಾಣ ಕರ್ನಾಟಕ ಸಾರಿಗೆ - 7,95,315
ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 2,52,39,732 ರೂ. ಆಗುತ್ತದೆ.
ಒಟ್ಟು ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ- 58,12,313
ಒಟ್ಟು ಮಹಿಳೆಯರ ಪ್ರಯಾಣ ದ ಮೌಲ್ಯ - 12,80,04,257 ರೂ. ಆಗುತ್ತದೆ
ಜೂನ್ 11 ರಿಂದ 20ರವರೆಗೂ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ- 5,98,19,437
ಒಟ್ಟು 10 ದಿನಗಳ ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 139,53,04,186 ರೂ. ಆಗಿದೆ.
ಉಚಿತ ಬಸ್ ಪ್ರಯಾಣ ಯೋಜನೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಒಂದೊಂದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿದೆ. 5 ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವ ‘ಶಕ್ತಿ ಯೋಜನೆ’ ಸಹ ಒಂದು. ಇದೇ ಜೂನ್ 11ರಿಂದ ಈ ಯೋಜನೆ ಜಾರಿಯಾಗಿದ್ದು, ರಾಜ್ಯದ ಎಲ್ಲಾ ಮಹಿಳೆಯರಿಗೂ ಉಚಿತ್ ಬಸ್ ಪ್ರಯಾಣದ ಅವಕಾಶ ನೀಡಲಾಗಿದೆ.
ಇದನ್ನೂ ಓದಿ: ನಮ್ಮ ಸರ್ಕಾರದ ಅವಧಿಯಲ್ಲಿ ಕಮಿಷನ್ ದಂಧೆಗೆ ಸಂಪೂರ್ಣ ಕಡಿವಾಣ: ಸಿಎಂ ಸಿದ್ದರಾಮಯ್ಯ ಭರವಸೆ
ಉಚಿತ ಬಸ್ ಪ್ರಯಾಣ ಇರುವುದರಿಂದ ಪ್ರತಿಯೊಂದು ಜಿಲ್ಲೆಗಳ ಬಸ್‍ಸ್ಟ್ಯಾಂಡ್‍ಗಳಲ್ಲಿ ಮಹಿಳೆಯರದ್ದೇ ಕಾರುಬಾರು ಶುರುವಾಗಿದೆ. ಸಾಮರ್ಥ್ಯಕ್ಕಿಂತಲೂ ಹೆಚ್ಚು ಜನರು ಬಸ್‍ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಕೆಲವು ಕಡೆ ಸೀಟಿಗಾಗಿ ಜಗಳಗಳು ನಡೆಯುತ್ತಿವೆ. ಪ್ರತಿದಿನವೂ ಒಂದಲ್ಲ ಒಂದು ರೀತಿಯ ಅವಾಂತರಗಳು ನಡೆಯುತ್ತಲೇ ಇವೆ. ಇದರಿಂದ ಬಸ್ ಡ್ರೈವರ್ ಮತ್ತು ಕಂಡಕ್ಟರ್‍ಗಳಿಗೆ ದೊಡ್ಡ ತಲೆನೋವಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.