Shakti Scheme: 2023ರ ವಿಧಾನಸಭಾ ಚುನಾವಣೆಗಿಂತ ಮೊದಲು ಕಾಂಗ್ರೆಸ್ ಪಕ್ಷವು ನಾಡಿನ ಜನತೆಗೆ 5 ಗ್ಯಾರಂಟಿ ಯೋಜನೆಗಳ ಭರವಸೆ ನೀಡಿತ್ತು. ಫಲಿತಾಂಶದ ಬಳಿಕ 136 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೇರಿತು. ಇದಾದ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನ ಅನುಷ್ಠಾನಗೊಳಿಸುವ ಮೂಲಕ ʼನುಡಿದಂತೆ ನಡೆದಿದ್ದೇವೆʼ ಎಂದು ಹೇಳಿಕೊಂಡಿತ್ತು.
ಸರ್ಕಾರದ ಉಚಿತ ಯೋಜನೆಗಳ ಪೈಕಿ ಅತ್ಯಂತ ಯಶಸ್ವಿ ಯೋಜನೆಯಾಗಿ ʼಶಕ್ತಿ ಯೋಜನೆʼ ಹೊರಹೊಮ್ಮಿದೆ. ಸದ್ಯ ಈ ಶಕ್ತಿ ಯೋಜನೆಯಡಿ ಈಗಾಗಲೇ 500 ಕೋಟಿ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಈ ಹಿನ್ನೆಲೆ ಇಂದು (ಜುಲೈ 14) ಸಿಎಂ ಸಿದ್ದರಾಮಯ್ಯನವರು ಕಂಡಕ್ಟರ್ ಆಗಿದ್ದು, ಮಹಿಳೆಯರಿಗೆ 500ನೇ ಕೋಟಿಯ ಟಿಕೆಟ್‌ಅನ್ನ ವಿತರಿಸಿದ್ದಾರೆ.
ಇದನ್ನೂ ಓದಿ: ನಾನೇ ಐದು ವರ್ಷ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ: ಸಚಿವ ಶಿವಾನಂದ ಪಾಟೀಲ್ ಹೇಳಿದ್ದೇನು?
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳಾಗಿಸುವ ಉದ್ದೇಶದಿಂದ ಜಾರಿಗೊಳಿಸಿದ ಶಕ್ತಿ ಯೋಜನೆಯು ನಿರೀಕ್ಷೆಗೂ ಮೀರಿ ಅರ್ಹರನ್ನು ತಲುಪುತ್ತಿರುವುದು ಗ್ಯಾರಂಟಿ ಯೋಜನೆಯೊಂದರ ಯಶಸ್ಸಿಗೆ ಹಿಡಿದ ಕೈಗನ್ನಡಿ.
'ಶಕ್ತಿʼಜಾರಿಯಾದ ನಂತರದಿಂದ ಈವರೆಗೆ 500 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಗಳಲ್ಲಿ ಪ್ರಯಾಣ ಮಾಡಿದ್ದು, ಈವರೆಗಿನ ಒಟ್ಟು ಟಿಕೆಟ್… pic.twitter.com/KrtRPkUfNG
— Siddaramaiah (@siddaramaiah) July 14, 2025
ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಈಗಾಗಲೇ ಬರೋಬ್ಬರಿ 500 ಕೋಟಿ ಜನರನ್ನ ತಲುಪಿದೆ. ಇಂದು 500ನೇ ಕೋಟಿಯ ಟಿಕೆಟ್ ಬಸ್‌ನಲ್ಲಿ ಕಂಡಕ್ಟರ್ ಆಗಿ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ವಿತರಿಸಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಕುಮಾರಕೃಪಾ ರಸ್ತೆಯ ವಿಂಡ್ಸರ್ ವೃತ್ತದ ಬಳಿ ಬಸ್‌ನಲ್ಲಿ ಸಿಎಂ ಸಿದ್ದರಾಮಯ್ಯನವರು ಮಹಿಳೆಯರಿಗೆ ಟಿಕೆಟ್ ವಿತರಿಸಿದ್ದಾರೆ.
ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ ಮಾಡಿರುವ ಸಂಭ್ರಮದ ಅಂಗವಾಗಿ ಇಂದು ಸಾಂಕೇತಿಕವಾಗಿ 500 ಕೋಟಿ ಸಾಧನೆಯ ಉಚಿತ ಟಿಕೇಟನ್ನು ವಿತರಿಸಿದೆ.
ನಾಡಿನ ಹೆಣ್ಣುಮಕ್ಕಳು ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗೆ ಕುಟುಂಬದ ಯಜಮಾನನ ಮೇಲೆ ಅವಲಂಬಿತರಾಗದೆ ಸ್ವತಂತ್ರ… pic.twitter.com/gDjwHiyN3g
— Siddaramaiah (@siddaramaiah) July 14, 2025
ಟಿಕೆಟ್ ವಿತರಿಸುವ ಮೂಲಕ ಶಕ್ತಿ ಯೋಜನೆಯ ಸಂಭ್ರಮಾಚರಣೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ರಾಜ್ಯದಾದ್ಯಂತ ಸಿಹಿ ಹಂಚಿಕೆ ಮೂಲಕವೂ ಸಂಭ್ರಮಾಚರಣೆಗೆ ಸಾರಿಗೆ ಇಲಾಖೆ ಚಾಲನೆ ನೀಡಿದೆ.
ಇದನ್ನೂ ಓದಿ: ಕದನದೊಳ್ ಕಲಿ "ಸಿದ್ದು" ಕೆಣಕಿ ಉಳಿದವರಿಲ್ಲ: ಕೆಪಿಸಿಸಿ ಅಧ್ಯಕ್ಷ ಬದಲಾವಣೆಗೆ ಸಿಎಂ ಪಟ್ಟು; ಜಾರಕಿಹೊಳಿ ಮುಂದಿನ....?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









