ಜೂನ್ 11 ರಂದು ಶಕ್ತಿ ಯೋಜನೆ ಜಾರಿಗೆ-ಸಿಎಂ ಸಿದ್ದರಾಮಯ್ಯ
ಕನ್ನಡ ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ `ಶಕ್ತಿ` ಯೋಜನೆಗೆ ರಾಜ್ಯಾದ್ಯಂತ ಏಕಕಾಲಕ್ಕೆ ಚಾಲನೆ ನೀಡಲು ನಿರ್ಧರಿಸಿದ್ದು, ಈ ಕುರಿತು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರು ಮತ್ತು ಶಾಸಕರಿಗೆ ಕೆಲವು ಸೂಚನೆಗಳನ್ನು ನೀಡಿದರು.
ಬೆಂಗಳೂರು: ಕನ್ನಡ ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ 'ಶಕ್ತಿ' ಯೋಜನೆಗೆ ರಾಜ್ಯಾದ್ಯಂತ ಏಕಕಾಲಕ್ಕೆ ಚಾಲನೆ ನೀಡಲು ನಿರ್ಧರಿಸಿದ್ದು, ಈ ಕುರಿತು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರು ಮತ್ತು ಶಾಸಕರಿಗೆ ಕೆಲವು ಸೂಚನೆಗಳನ್ನು ನೀಡಿದರು.
ಇದನ್ನೂ ಓದಿ: ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜೂನ್ 11 ರಂದು ಸಮಸ್ತ ಕನ್ನಡಿಗರಿಗೆ ಸಮರ್ಪಣೆ ಆಗಲಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ ತುತ್ತಾಗಿರುವ ಕನ್ನಡ ನಾಡಿನ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥಪೂರ್ಣವಾಗಿರಲಿದೆ.
ಇದನ್ನೂ ಓದಿ: ಮೆದುಳು ಕ್ಯಾನ್ಸರ್ ವಿರುದ್ಧದ ಸಮರ; ಭಾರತದಲ್ಲಿ ಶೀಘ್ರ ಪತ್ತೆಮಾಡಬೇಕಾದ ತುರ್ತು ಅಗತ್ಯ
ನಮ್ಮ ಸರ್ಕಾರವು ತನ್ನ ಮೇಲೆ ಬೀಳುವ ಆರ್ಥಿಕ ಹೊರೆಯ ಹೊರತಾಗಿಯೂ ಜನ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅಸ್ತಿತ್ವಕ್ಕೆ ಬಂದ ತಿಂಗಳ ಒಳಗೇ ಜಾರಿಗೆ ತರುತ್ತಿದೆ. ಯಾವುದೇ ಜಾತಿ, ಧರ್ಮದ ಮಿತಿಗೆ ಒಳಪಡದ ಶಕ್ತಿ ಯೋಜನೆಯ ಅನುಕೂಲ ಅರ್ಹರಿಗೆಲ್ಲಾ ತಲುಪುವಂತೆ ಸಚಿವರು ಮತ್ತು ಶಾಸಕರು ನೋಡಿಕೊಳ್ಳಬೇಕು. ಸದ್ಯದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಲಾಗುವುದು.ನೇಮಕವಾದ ತಕ್ಷಣ ಎಲ್ಲಾ ಸಚಿವರೂ ಕಾರ್ಯೋನ್ಮುಖರಾಗಿ ಯೋಜನೆಗೆ ಅರ್ಥಪೂರ್ಣ ಚಾಲನೆ ನೀಡಬೇಕು. ಬೆಂಗಳೂರಿನಲ್ಲಿ ನಾನು ಯೋಜನೆಗೆ ಚಾಲನೆ ನೀಡುತ್ತೇನೆ. ಅದೇ ಹೊತ್ತಲ್ಲಿ ಶಾಸಕರು ಮತ್ತು ಜಿಲ್ಲಾ ಸಚಿವರುಗಳು ತಮ್ಮ ತಮ್ಮ ಜಿಲ್ಲೆ ಮತ್ತು ಕ್ಷೇತ್ರಗಳಲ್ಲಿ ಯೋಜನೆಗೆ ಚಾಲನೆ ನೀಡಬೇಕು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.