)
ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ 'ಶಕ್ತಿ' ಯೋಜನೆಯು ಇಂಟರ್ನ್ಯಾಷನಲ್ ಬುಕ್ ಆಫ್ ರಿಕಾರ್ಡ್ಸ್ನಲ್ಲಿ 'ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್' ಗೌರವಕ್ಕೆ ಪಾತ್ರವಾಗಿದೆ.
ಈ ಯೋಜನೆಯು ಈಗಾಗಲೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿದ್ದು, ಇದೀಗ ಮತ್ತೊಂದು ಮೈಲಿಗಲ್ಲು ಸಾಧಿಸಿ ವಿಶ್ವ ದಾಖಲೆ ಬರೆದಿದೆ.ಶಕ್ತಿ ಯೋಜನೆಯು 2023ರ ಜೂನ್ 11ರಂದು ಚಾಲನೆಗೊಂಡಿದ್ದು, 2025ರ ಜುಲೈ 25ರವರೆಗಿನ ಅವಧಿಯಲ್ಲಿ ರಾಜ್ಯ ಸಾರಿಗೆ ನಿಗಮದ ಬಸ್ಸುಗಳಲ್ಲಿ 504 ಕೋಟಿ 90 ಲಕ್ಷಕ್ಕೂ ಅಧಿಕ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ.ಈ ಅಭೂತಪೂರ್ವ ಸಾಧನೆಯು ಶಕ್ತಿ ಯೋಜನೆಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ.
ಸಮಸ್ತ ಕನ್ನಡಿಗರು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಶಕ್ತಿʼಯು International Book of Records - World Record of Excellence ಗೆ ಸೇರ್ಪಡೆಗೊಂಡು, ಮತ್ತೊಂದು ಮೈಲಿಗಲ್ಲು ಸಾಧಿಸಿದೆ.
ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ, ಜೂನ್ 11, 2023 ರಿಂದ ಜುಲೈ 25, 2025ರ… pic.twitter.com/407Qud3WIA
— CM of Karnataka (@CMofKarnataka) October 3, 2025
ಈಗ ಈ ಕುರಿತಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ'ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗದಲ್ಲಿ ತೊಡಗಿಕೊಂಡಿದ್ದು, ಇದರಿಂದ ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ. ಸ್ತ್ರೀ ಸಬಲೀಕರಣದ ಮಹತ್ವದ ಹೆಜ್ಜೆಯಲ್ಲಿ ನಮ್ಮೊಂದಿಗೆ ಜೊತೆಯಾಗಿರುವ ಎಲ್ಲಾ ಹೆಣ್ಣುಮಕ್ಕಳಿಗೆ ಶಕ್ತಿ ಯೋಜನೆಯ ಸಾಧನೆಯ ಶ್ರೇಯ ಸಲ್ಲುತ್ತದೆ' ಎಂದು ಅವರು ಹೇಳಿದ್ದಾರೆ. ಇದೆ ವೇಳೆ ಸಿಎಂ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಕ್ಕೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.