Shakti Yojana: ಶಕ್ತಿ ಯೋಜನೆ ಇನ್ನೂ 10 ವರ್ಷ ಇರುತ್ತದೆ- ಸಚಿವ ರಾಮಲಿಂಗಾರೆಡ್ಡಿ
ಮುಂಬರುವ 2024ರ ಲೋಕಸಭಾ ಚುನಾವಣೆ ಬಳಿಕ ‘ಶಕ್ತಿ’ ಯೋಜನೆ ನಿಲ್ಲುತ್ತದೆ ಎಂದು ವಿಪಕ್ಷಗಳು ಟೀಕಿಸುತ್ತಿವೆ. ಆದರೆ ನಾವು ಮತ್ತೆ ಅಧಿಕಾರಕ್ಕೆ ಬಂದು ಈ ಯೋಜನೆಯನ್ನು ಮುಂದುವರೆಸಿಕೊಂಡು ಹೋಗುತ್ತೇವೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಬೆಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಕಾಂಗ್ರೆಸ್ ಸರ್ಕಾರದ ‘ಶಕ್ತಿ’ ಯೋಜನೆ ಇನ್ನೂ 10 ವರ್ಷಗಳ ಕಾಲ ಇರುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಪಕ್ಷಗಳ ರಾಜಕೀಯ ಅಪಪ್ರಚಾರ ಮೀರಿ ‘ಶಕ್ತಿ’ ಯೋಜನೆ ಯಶಸ್ಸು ಕಂಡಿದೆ’ ಎಂದು ಹೇಳಿದರು.
ನಮ್ಮ ಸರ್ಕಾರದ ಶಕ್ತಿ ಯೋಜನೆ ಇನ್ನೂ 10 ವರ್ಷ ಇರುತ್ತದೆ. ಯಾಕೆಂದರೆ 5 ವರ್ಷ ಮುಗಿದ ಬಳಿಕ ರಾಜ್ಯದಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತವೆ. ಈ ಯೋಜನೆ ಮುಂದುವರೆಯಲಿದೆ. ಶಕ್ತಿ ಯೋಜನೆ ಟೀಕಿಸುತ್ತಿರುವ ಬಿಜೆಪಿಯವರು 35 ಸ್ಥಾನಕ್ಕೆ ಇಳಿಯಲಿದ್ದಾರೆ ಎಂದು ರಾಮಲಿಂಗಾರೆಡ್ಡಿ ಟೀಕಿಸಿದರು.
ಇದನ್ನೂ ಓದಿ: ಸಚಿವ ಶಿವರಾಜ್ ತಂಗಡಗಿ ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದಾರೆ!
ಮುಂಬರುವ 2024ರ ಲೋಕಸಭಾ ಚುನಾವಣೆ ಬಳಿಕ ‘ಶಕ್ತಿ’ ಯೋಜನೆ ನಿಲ್ಲುತ್ತದೆ ಎಂದು ವಿಪಕ್ಷಗಳು ಟೀಕಿಸುತ್ತಿವೆ. ಆದರೆ ನಾವು ಮತ್ತೆ ಅಧಿಕಾರಕ್ಕೆ ಬಂದು ಈ ಯೋಜನೆಯನ್ನು ಮುಂದುವರೆಸಿಕೊಂಡು ಹೋಗುತ್ತೇವೆ. ಲೋಕಸಭೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದೆ. ಆ ನಿಟ್ಟಿನಲ್ಲಿ ಪಕ್ಷದ ಎಲ್ಲಾ ನಾಯಕರು ಕೆಲಸ ಮಾಡುತ್ತಿದ್ದಾರೆಂದು ಸಚಿವರು ತಿಳಿಸಿದರು.
ಇದೇ ಡಿಸೆಂಬರ್ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ. ಈ ಬಾರಿ ಕಾಂಗ್ರೆಸ್‍ಗೆ ಬಹುಮತ ದೊರೆಯಲಿದೆ. ಶಾಸಕರಿಗೆ ಇಷ್ಟ ಇದೆಯೋ ಅಥವಾ ಇಲ್ಲವೋ ಡಿಸೆಂಬರ್‍ಗೆ ಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ. ಚುನಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಈಗಾಗಲೇ ಮಾತನಾಡಿದ್ದಾರೆ ಎಂದು ಅವರು ಹೇಳಿದರು.
ಇದನ್ನೂ ಓದಿ: 1 ರೂ.ಗೆ ರಾಗಿ ಮುದ್ದೆ ನೀಡಿ ಹೋಟೇಲ್ ತಿಂಡಿಗಳ ಬೆಲೆ ಏರಿಕೆ ಖಂಡಿಸಿದ ವಾಟಾಳ್..!
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ. ಆರಗ ಜ್ಞಾನೇಂದ್ರ ಅವರ ಮಾತು ಮಾತಲ್ಲ, ಇದು ಬಿಜೆಪಿ ಮತ್ತು ಸಂಘದವರ ಮನಸ್ಥಿತಿಯಾಗಿದೆ. ಆರಗ ಜ್ಞಾನೇಂದ್ರ ತಲೆಯಲ್ಲಿ ಕೂದಲು ಇರಬಹುದು, ಆದರೆ ಬುದ್ಧಿನೂ ಇಲ್ಲ, ಮೆದುಳು ಇಲ್ಲ. ಅವರು ಕೂಡಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಸಾರಿಗೆ ಇಲಾಖೆ ನೌಕರರಿಗೆ ವೇತನ ನೀಡುವ ವಿಚಾರವಾಗಿ ಮಾತನಾಡಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ‘ನಿಮ್ಮ ಅವಧಿಯಲ್ಲಿ 25ನೇ ತಾರೀಕಿನವರೆಗೂ ವೇತನ ನೀಡಿರಲಿಲ್ಲ. ನಮ್ಮ ಸರ್ಕಾರದಲ್ಲಿ ಎಲ್ಲಾ ಸಿಬ್ಬಂದಿಗೆ 1ನೇ ತಾರೀಕಿನಂದೇ ಪೂರ್ತಿ ಸಂಬಳವಾಗುತ್ತಿದೆ. ಜನರಿಗೆ ತಪ್ಪು ಮಾಹಿತಿ ನೀಡದಿರಿ ಎಂದು ಹೇಳಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.