ಬೆಂಗಳೂರು:  ಶಕ್ತಿ ಯೋಜನೆ ಅಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಜೂನ್ 11ರಂದು ಮಧ್ಯಾಹ್ನ 01 ಗಂಟೆಯಿಂದ ಅನ್ವಯವಾಗುವಂತೆ ಜಾರಿಗೊಳಿಸಲಾಗುತ್ತಿದೆ. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ ಪುರಾವೆಗಾಗಿ ತಮ್ಮ ಮೂಲ ದಾಖಲಾತಿಗಳನ್ನು ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ಕುಂಟು ನೆಪ ನೀಡಿ ಅರ್ಜಿ ತಿರಸ್ಕರಿಸುವಂತಿಲ್ಲ- ಸಿಎಂ ಸಿದ್ದರಾಮಯ್ಯ ಎಚ್ಚರಿಕೆ  


ಮೂಲ ದಾಖಲಾತಿಗಳ ವಿವರ:


ಆಧಾರ್ ಕಾರ್ಡ, ಚುನಾವಣಾ ಆಯೋಗ ವಿತರಿಸಿರುವ ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಿಗೆ ಪತ್ರ, ವಾಸಸ್ಥಳ ನಮೂದಿಸಿರುವ ಭಾರತ ಸರ್ಕಾರದ ಇಲಾಖೆಗಳು, ಭಾರತ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆ, ಸಂಸ್ಥೆಗಳು (ಪಿ.ಎಸ್.ಯು.ಎಸ್) ವಿತರಿಸಿರುವ ಗುರುತಿನ ಚೀಟಿ ಅಥವಾ ವಾಸಸ್ಥಳ ನಮೂದಿಸಿರುವಂತಹ ಕರ್ನಾಟಕ ಸರ್ಕಾರದ ಇಲಾಖೆಗಳು, ಕರ್ನಾಟಕ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆ, ಸಂಸ್ಥೆಗಳು ವಿತರಿಸಿರುವ ಗುರುತಿನ ಚೀಟಿ ಅಥವಾ ಕರ್ನಾಟಕ ಸರ್ಕಾರದ ಅಂಗವಿಕಲರ ಮತ್ತು ಹಿರಿಯ ನಾಗರೀಕ ಕಲ್ಯಾಣ ನಿರ್ದೇಶನಾಲಯದವರು ವಿತರಿಸಿರುವ ಗುರುತಿನ ಚೀಟಿ. ಈ ಎಲ್ಲಾ ಗುರುತಿನ ಚೀಟಿಗಳಲ್ಲಿ ಯಾವುದಾದರು ಒಂದನ್ನು ತೋರಿಸಿ “ಶೂನ್ಯ ಮೊತ್ತದ ಟಿಕೇಟ್’’ ಪಡೆದು ಮಹಿಳೆಯರು ಜೂನ್ 11ರ ಮಧ್ಯಾಹ್ನ 01 ಗಂಟೆಯಿಂದ ಉಚಿತ ಸಾರಿಗೆ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ಸಾರಿಗೆ ಸಂಸ್ಥೆಯ ಅಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.