ಬೆಂಗಳೂರು: ಶಿರಾ ಹಾಗೂ ಆರ್ ಆರ್ ನಗರ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ(BJP) ಹಾಗೂ ಕಾಂಗ್ರೆಸ್ ನಡುವೆ ಭರ್ಜರಿ ಪೈಪೋಟಿ ನಡುವೆ, ಬಿಜೆಪಿ ಅಭ್ಯರ್ಥಿಗಳು ಗೆಲುವನ್ನು ಸಾಧಿಸಿದ್ದಾರೆ. ಶಿರಾದಲ್ಲಿ ರಾಜೇಶ್ ಗೌಡ ಗೆಲವನ್ನು ಸಾಧಿಸುವ ಮೂಲಕ, ಮೊಟ್ಟ ಮೊದಲ ಬಾರಿಗೆ ಶಿರಾದಲ್ಲಿ ಕಮಲವನ್ನು ಅರಳಿಸಿದ್ದಾರೆ. ಇತ್ತ ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಹ್ಯಾಟ್ರಿಕ್ ಗೆಲುವನ್ನು ಸಾಧಿಸಿದ್ದಾರೆ. ಈ ಮೂಲಕ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಧೂಳಿಪಟವಾಗಿದ್ದರೇ, ಬಿಜೆಪಿ ಭರ್ಜರಿ ಗೆಲುವನ್ನು ಸಾಧಿಸಿದೆ.


RR ನಗರದ್ಲಲಿ ‘ಭರ್ಜರಿ ಗೆಲುವು’ ಸಾಧಿಸಿದ ಬಿಜೆಪಿ  


COMMERCIAL BREAK
SCROLL TO CONTINUE READING

ಇಂದು ಶಿರಾ ಹಾಗೂ ರಾಜರಾಜೇಶ್ವರಿನಗರ ಉಪ ಚುನಾವಣೆಯ ಮತಏಣಿಕೆಯಲ್ಲಿ ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವನ್ನು ಸಾಧಿಸಿದೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧ್ಯಕ್ಷರಾದ ನಂತ್ರ, ಮೊದಲ ಬಾರಿಗೆ ಸೋಲನ್ನು ಕಾಣುವಂತಾಗಿದೆ. ಬಿಜೆಪಿಯ ವಿಜಯೇಂದ್ರ ಮಾಸ್ಟರ್ ಪ್ಲಾನ್ ಗೆ ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಗೆಲುವಿನ ನಗೆಯನ್ನು ಬೀರುವಂತಾಗಿದೆ.


RR ನಗರದ್ಲಲಿ ಕುಸುಮಾಗೆ ಶುರುವಾಯ್ತಾ ಸೋಲಿನ ಭಯ?: ನಿನ್ನೆ ಹೇಳಿದ ಮಾತಿನಂತೆ ನಡೆಯದ ಕೈ​ ಅಭ್ಯರ್ಥಿ


ಶಿರಾದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿಯ ರಾಜೇಶ್ ಗೌಡ ಹಾಗೂ ಕಾಂಗ್ರೆಸ್ ನ ಟಿಬಿ ಜಯಚಂದ್ರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಇಂತಹ ಪೈಪೋಟಿಯ ನಡುವೆಯೂ 19ನೇ ರೌಂಡ್ ಮತಏಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿಯ ಅಭ್ಯರ್ಥಿ ರಾಜೇಶ್ ಗೌಡ 55,413 ಮತಗಳನ್ನು ಗಳಿಸಿದ್ದರೇ, ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ 48,229 ಮತಗಳನ್ನು ಪಡೆದುಕೊಂಡಿದ್ದಾರೆ. ಜೆಡಿಎಸ್ ನ ಅಮ್ಮಾಜಮ್ಮ 26,188 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಬಿಜೆಪಿಯ ಅಭ್ಯರ್ಥಿ ರಾಜೇಶ್ ಗೌಡ 7,184 ಅಂತಹದಲ್ಲಿ ಮುನ್ನಡೆ ಸಾಧಿಸುವ ಮೂಲಕ, ಶಿರಾ ಉಪ ಚುನಾವಣೆಯಲ್ಲಿ ಗೆಲುವಿನ ಸನಿಹದಲ್ಲಿ ಬಂದು ನಿಂತಿದ್ದಾರೆ.


Bihar Election 2020: ಫಲಿತಾಂಶಗಳ ಕುರಿತು Prakash Rai ನೀಡಿರುವ ಹೇಳಿಕೆ ಭಾರಿ ವೈರಲ್


ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಹ್ಯಾಟ್ರಿಕ್ ಗೆಲುವನ್ನು ಸಾಧಿಸಿದ್ದಾರೆ. ಮುನಿರತ್ನ 1,03,291 ಮತಗಳನ್ನು ಗಳಿಸಿದ್ದರೇ, ಕಾಂಗ್ರೆಸ್ ನ ಹೆಚ್ ಕುಸುಮಾ 58,743 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ನ ಕೃಷ್ಣ ಮೂರ್ತಿ 6,381 ಗಳಿಸಿದ್ದಾರೆ. ಬಿಜೆಪಿಯ ಅಭ್ಯರ್ಥಿ ಮುನಿರತ್ನ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 44,548 ಮತಗಳ ಅಂತರದಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಆದ್ರೇ ಅಧಿಕೃತವಾಗಿ ಚುನಾವಣಾ ಆಯೋಗದಿಂದ ಗೆಲವನ್ನು ಘೋಷಣೆ ಮಾಡುವುದು ಬಾಕಿ ಇದೆ.


ಬೈಎಲೆಕ್ಷನ್ ರಿಸಲ್ಟ್: RR.ನಗರ, ಶಿರಾ ಎರಡೂ ಕ್ಷೇತ್ರದಲ್ಲೂ ಬಿಜೆಪಿಗೆ ಭಾರಿ ಮುನ್ನಡೆ; ಕಾಂಗ್ರೆಸ್, ಜೆಡಿಎಸ್ ಹಿನ್ನಡೆ


RR ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ‘ಹ್ಯಾಟ್ರಿಕ್’ ಗೆಲುವು: ಅಂದಹಾಗೇ ಮುನಿರತ್ನ 2013ರ ಚುನಾವಣೆಯಲ್ಲಿ 71,064 ಮತಗಳನ್ನು ಗಳಿಸಿದ್ದ ಅವರು, 18,813 ಮತಗಳ ಅಂತರದಿಂದ ಗೆದ್ದಿದ್ದರು. 2018ರ ಚುನಾವಣೆಯಲ್ಲಿ ಮುನಿರತ್ನ 1,08,064 ಮತಗಳನ್ನು ಗಳಿಸಿ, 25,492 ಮತಗಳ ಅಂತರದಿಂದ ಗೆದ್ದಿದ್ದರು. ಇದೀಗ 2020ರ ಉಪ ಚುನಾವಣೆಯಲ್ಲಿ 1,03,291 ಮತಗಳನ್ನು ಗಳಿಸಿದ್ದು, 44,548ಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಹ್ಯಾಟ್ರಿಕ್ ಗೆಲುವನ್ನು ಸಾಧಿಸಿದ್ದಾರೆ. ಚುನಾವಣಾ ಆಯೋಗದಿಂದ ಮುನಿರತ್ನ ಗೆಲುವನ್ನು ಅಧಿಕೃತವಾಗಿ ಘೋಷಣೆ ಮಾಡಬೇಕಿದೆ.