ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಬಿಸಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಿಧಾನಸಭಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಬಿಜೆಪಿಗೆ ಬಿಗ್ ಶಾಕ್ ನೀಡಲು ಶಿವಸೇನೆ ಮುಂದಾಗಿದೆ.


COMMERCIAL BREAK
SCROLL TO CONTINUE READING

ಬಿಜೆಪಿ ಜತೆಗಿನ ಮುನಿಸು ಮುಂದೂವರೆಸಿದ ಶಿವಸೇನೆ, ಈ ಬಾರಿಯ  ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ಶಿವಸೇನೆ ನಿರ್ಧಾರ ಕೈಗೊಂಡಿದೆ. ಇರುವ 224 ಕ್ಷೇತ್ರಗಳ ಪೈಕಿ ಒಟ್ಟು 50 ರಿಂದ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಶಿವಸೇನೆ ನಿರ್ಧರಿಸಿದ್ದು, ಮರಾಠ ಸಮುದಾಯ ಹೆಚ್ಚಿರುವ ಕ್ಷೇತ್ರಗಳಲ್ಲಿ ಏಕಾಂಗಿ ಸ್ಪರ್ಧೆ ನೀಡುವ ಸಾಧ್ಯತೆ ಇದೆ.


ಶಿವಸೇನಾ ಮುಖಂಡ ಸಂಜಯ್ ರಾವತ್ ಮುಂಬೈನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಎಂಇಎಸ್  ಅಭ್ಯರ್ಥಿಗಳಿಗೂ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. 


ಶಿವಸೇನೆಯ ಈ ನಿರ್ಧಾರದಿಂದ ಬಿಜೆಪಿ ಮತ ಬ್ಯಾಂಕಿಗೆ ಕತ್ತರಿ ಬೀಳಲಿದ್ದು, ಬಿಜೆಪಿಗೆ ಇದೊಂದು ನುಂಗಲಾರದ ತುತ್ತಾಗಿ ಪರಿಣಮಿಸಲಿದೆ.