ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ: ದುಷ್ಟ ಶಕ್ತಿಗಳ ಮಟ್ಟ ಹಾಕಲಾಗಿದೆ ಎಂದ ಬಿಜೆಪಿ

ಸಿದ್ದರಾಮಯ್ಯ & ಕಾಂಗ್ರೆಸ್‌ ಪಕ್ಷ ಮತಾಂಧರ, ಜಿಹಾದಿಗಳ ಮೇಲೆ ಹೊಂದಿರುವ ಮಮಕಾರವೇ ಇದಕ್ಕೆ ನೇರ ಕಾರಣ. ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? ಎಂದು ಬಿಜೆಪಿ ಪ್ರಶ್ನಿಸಿದೆ.

Written by - Puttaraj K Alur | Last Updated : Aug 16, 2022, 12:50 PM IST
  • ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳ ಮಟ್ಟ ಹಾಕಲಾಗಿದೆ
  • ಶಿವಮೊಗ್ಗದಲ್ಲಿ ಚೂರಿ ಇರಿತ ಪ್ರಕರಣ ಸಂಬಂಧ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ
  • ಶಾಂತಿ ಕದಡಲು ಪ್ರಯತ್ನಿಸಿದ ಜಿಹಾದಿ ಶಕ್ತಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿ ಷಡ್ಯಂತ್ರ ಹತ್ತಿಕ್ಕಲಾಗಿದೆ
ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ: ದುಷ್ಟ ಶಕ್ತಿಗಳ ಮಟ್ಟ ಹಾಕಲಾಗಿದೆ ಎಂದ ಬಿಜೆಪಿ  title=
ದುಷ್ಟ ಶಕ್ತಿಗಳ ಮಟ್ಟ ಹಾಕಲಾಗಿದೆ

ಬೆಂಗಳೂರು: ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳ ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ಗುಡಿಗಿದೆ. ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ ಸಂಬಂಧ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಘಟನೆಯನ್ನು ತೀವ್ರವಾಗಿ ಖಂಡಿಸಿದೆ.

‘ಶಿವಮೊಗ್ಗದಲ್ಲಿ ಚೂರಿ ಇರಿತ ಪ್ರಕರಣ ಸಂಬಂಧ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ. ನದೀಮ್, ಅಬ್ದುಲ್ ರೆಹಮಾನ್ ಮತ್ತು ಜಬೀವುಲ್ಲಾ ಪ್ರಮುಖ ಆರೋಪಿಗಳು. ಆರೋಪಿಗಳ ಬಂಧನ ಕಾರ್ಯಾಚರಣೆ ವೇಳೆ ಪೊಲೀಸರ ವಿರುದ್ಧ ಚಾಕು ಬೀಸಿದ ಆರೋಪಿಯ ಕಾಲಿಗೆ ಗುಂಡೇಟು ನೀಡಲಾಗಿದೆ. ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಪ್ರೀತಿಸಿದ ಹುಡುಗಿ ಜೊತೆ ಮಠ ಬಿಟ್ಟು ಪರಾರಿಯಾದ ಸ್ವಾಮೀಜಿ..!

‘ಈ ಹಿಂದೆ ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಹಾಗೂ ಹುಬ್ಬಳ್ಳಿ, ದಕ್ಷಿಣ ಕನ್ನಡ ಹಾಗೂ ಇನ್ನಿತರ ಜಿಲ್ಲೆಗಳಲ್ಲಿ ಶಾಂತಿ ಕದಡಲು ಪ್ರಯತ್ನಿಸಿದ ಮತಾಂಧ ಜಿಹಾದಿ ಶಕ್ತಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿ, ಷಡ್ಯಂತ್ರವನ್ನು ಹತ್ತಿಕ್ಕಲಾಗಿದೆ. ಸಮಾಜ ಘಾತುಕ ಶಕ್ತಿಗಳನ್ನು ಬಗ್ಗುಬಡಿಯಲು ಬಿಜೆಪಿ ಸರ್ಕಾರ ಬದ್ಧವಾಗಿದೆ’ ಎಂದು ಬಿಜೆಪಿ ಹೇಳಿದೆ.

‘ಶಿವಮೊಗ್ಗದ ಚಾಕು ಇರಿತ ಪ್ರಕರಣದ ಆರೋಪಿಗಳು ಪೊಲೀಸರ ಮೇಲೆಯೇ ಚಾಕು ತೋರಿಸಿ ಬೆದರಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಪಕ್ಷ ಮತಾಂಧರ, ಜಿಹಾದಿಗಳ ಮೇಲೆ ಹೊಂದಿರುವ ಮಮಕಾರವೇ ಇದಕ್ಕೆ ನೇರ ಕಾರಣ. ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ?’ ಎಂದು ಬಿಜೆಪಿ ಪ್ರಶ್ನಿಸಿದೆ.

ಇದನ್ನೂ ಓದಿ: ನೆಲದ ಋಣ ಮರೆಯದ ಟಿಬೆಟಿಯನ್ನರು... ತಿರಂಗ ಹಾರಾಟ-ಭಾರತಾಂಬೆಗೆ ಜೈಕಾರ!!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News