)
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮುಡಲ ವಿಠ್ಠಲಾಪುರ ಬಳಿ ಹಣಕಾಸಿನ ವಿಚಾರದಿಂದ ಇಬ್ಬರ ನಡುವೆ ಉದ್ವಿಗ್ನತೆ ಉಂಟಾಗಿ ದಾಳಿ ನಡೆದ ಘಟನೆ ಬೆಳಕಿಗೆ ಬಂದಿದೆ.
ಮಾಹಿತಿಯ ಪ್ರಕಾರ, ಚೋಟು ಎನ್ನುವ ವ್ಯಕ್ತಿ ಹೊಟೇಲ್ನಲ್ಲಿ ಊಟ ಮಾಡುತ್ತಿದ್ದ ವೇಳೆ ಫಯಾದ್ ಮತ್ತು ಅವನ ಸಹಚರರು ಕಾರಿನಲ್ಲಿ ಬಂದು ಮಚ್ಚು ಹಾಗೂ ಲಾಂಗ್ನಿಂದ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಚೋಟುಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ : ಸೇಡಂನಲ್ಲಿ ಆರ್ಎಸ್ಎಸ್ ಪಥಸಂಚಲನ ವೇಳೆ ಹೈಡ್ರಾಮಾ
ಮೂಲಗಳ ಪ್ರಕಾರ, ಫಯಾದ್ ಚೋಟುಗೆ ಸುಮಾರು ಒಂದೂವರೆ ಲಕ್ಷ ರೂ. ಹಣ ನೀಡಬೇಕಿತ್ತು. ಈ ಹಣದ ವಿಚಾರವಾಗಿ ನಿನ್ನೆ ಇಬ್ಬರ ನಡುವೆ ವಾಗ್ವಾದ ಉಂಟಾಗಿದ್ದು, ಅದರ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಘಟನೆಯ ಸಂಪೂರ್ಣ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.