Student Suicide: ಶಿವಮೊಗ್ಗದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು

ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿ ಸಂದೀಪ್ ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ  ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Written by - Zee Kannada News Desk | Last Updated : May 16, 2022, 06:26 PM IST
  • ಶಿವಮೊಗ್ಗದ ಜೆಎನ್‍ಎನ್‍ಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿ ನೇಣಿಗೆ ಶರಣು
  • ಇಂಜಿನಿಯರಿಂಗ್ 3ನೇ ಸೆಮಿಸ್ಟರ್‍ನ ಕಂಪ್ಯೂಟರ್ ಸೈನ್ಸ್ ಪರೀಕ್ಷೆ ಬರೆದಿದ್ದ ಸಂದೀಪ್ ಆತ್ಮಹತ್ಯೆ
  • ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Student Suicide: ಶಿವಮೊಗ್ಗದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು title=
ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿ ನೇಣಿಗೆ ಶರಣು

ಶಿವಮೊಗ್ಗ: ಶಿವಮೊಗ್ಗದ ಜೆಎನ್‍ಎನ್‍ಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿ ನೇಣಿಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ. ಕಲಬುರಗಿ ಮೂಲದ ಸಂದೀಪ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಇದನ್ನೂ ಓದಿ: ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆ: ನಮಗೇ ಮಗು ಕೊಡಿ ಎಂದು ದುಂಬಾಲು ಬಿದ್ದ ಜನ

ಇಂಜಿನಿಯರಿಂಗ್ 3ನೇ ಸೆಮಿಸ್ಟರ್‍ನ ಕಂಪ್ಯೂಟರ್ ಸೈನ್ಸ್ ಪರೀಕ್ಷೆ ಬರೆದಿದ್ದ ಸಂದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರೀಕ್ಷೆ ಮುಗಿದಿದ್ದರಿಂದ ಆತನ ರೂಂಮೇಟ್‍ಗಳು ಊರಿಗೆ ತೆರಳಿದ್ದರು. ಏಕಾಂಗಿಯಾಗಿದ್ದ ಸಂದೀಪ್ ಇಂದು ಮಧ್ಯಾಹ್ನ ಪ್ಯಾನ್‍ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಲವ್ ಮಾಡಲ್ಲ ಎಂದ ಯುವತಿ ಮೇಲೆ ಆಸಿಡ್ ಎರಚಿದ ಪಾಗಲ್ ಪ್ರೇಮಿ

ಸಂದೀಪ್ ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ  ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿರುವ ಪೊಲೀಸರು ವಿದ್ಯಾರ್ಥಿ ಸಾವಿಗೆ ಕಾರಣವೇನು ಅನ್ನೋದರ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News