ಶಾಲಾ ಮಕ್ಕಳಿಗೆ ಮೊಟ್ಟೆ ಬದಲು ತಾಯಿ ಕೈಗೆ ಹಣ ಕೊಡಬೇಕು: ಶೋಭಾ ಕರಂದ್ಲಾಜೆ

ಮಕ್ಕಳಿಗೆ ಮೊಟ್ಟೆ ಕೊಡುವುದು ಕೆಲ‌ ಸಮಾಜಕ್ಕೆ ‌ನೋವು ತರುತ್ತದೆ ಅಂದರೆ ಸರ್ಕಾರ ವಿಚಾರವನ್ನು ಮರುಪರಿಶೀಲನೆ ಮಾಡಬೇಕು ಅಂತಾ ಶೋಭಾ ಕರಂದ್ಲಾಜೆ ಹೇಳಿದ್ದಾರೆ

Written by - Zee Kannada News Desk | Last Updated : Dec 11, 2021, 12:40 PM IST
  • ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ವಿಚಾರಕ್ಕೆ ಸಂಬಂಧ ಪರ-ವಿರೋಧ ಚರ್ಚೆಯಾಗುತ್ತಿದೆ
  • ಆಹಾರ ಪದ್ದತಿ ಅವರವರ ಆಯ್ಕೆ, ಇದಕ್ಕೆ ಒತ್ತಡ ಹೇರುವುದು ಸರಿಯಲ್ಲ
  • ಸರ್ಕಾರ ಮೊಟ್ಟೆ ನೀಡುವ ವಿಚಾರ ಮರುಪರಿಶೀಲನೆ ಮಾಡಬೇಕಾಗಿದೆ ಎಂದ ಶೋಭಾ ಕರಂದ್ಲಾಜೆ
ಶಾಲಾ ಮಕ್ಕಳಿಗೆ ಮೊಟ್ಟೆ ಬದಲು ತಾಯಿ ಕೈಗೆ ಹಣ ಕೊಡಬೇಕು: ಶೋಭಾ ಕರಂದ್ಲಾಜೆ  title=
'ಮೊಟ್ಟೆ ಬದಲು ತಾಯಿ ಕೈಗೆ ದುಡ್ಡು ಕೊಡಿ'

ಬೆಂಗಳೂರು: ಶಾಲಾ ಮಕ್ಕಳಿಗೆ ಮೊಟ್ಟೆ(Egg Distribution in Schools) ನೀಡುವ ಬದಲು ಅವರ ತಾಯಿ ಕೈಗೆ ದುಡ್ಡು ಕೊಟ್ಟರೆ ಇನ್ನೂ ಚೆನ್ನಾಗಿರುತ್ತದೆ ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಶಾಲಾ ಮಕ್ಕಳಿಗೆ ಮೊಟ್ಟೆ(Egg) ನೀಡುವ ವಿವಾದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಮಕ್ಕಳ‌ ಆಹಾರದ ವಿಚಾರವನ್ನು ತಾಯಿಗೆ ಬಿಡಬೇಕು’ ಅಂತಾ ಹೇಳಿದ್ದಾರೆ.

ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಒಂದು ಮೊಟ್ಟೆ ವಿತರಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಇದಕ್ಕೆ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಶೋಭಾ ಕರಂದ್ಲಾಜೆ(Shobha Karandlaje), ‘ತಾಯಿಗಿಂತ ಮಕ್ಕಳನ್ನು ಚೆನ್ನಾಗಿ‌ ಯಾರೂ ನೋಡಿಕೊಳ್ಳುವುದಿಲ್ಲ. ಶಾಲಾ ಮಕ್ಕಳಿಗೆ ಮೊಟ್ಟೆ ಬದಲು ಅವರ ತಾಯಿ ಕೈಗೆ ದುಡ್ಡು ಕೊಟ್ಟರೆ ಚೆನ್ನಾಗಿ ಆಹಾರವನ್ನು ಹಾಕಬಹುದು. ಈ ಬಗ್ಗೆ ಚರ್ಚೆ ಆಗಬೇಕು’ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Bengaluru Police : ಬೆಳಗ್ಗೆ ಬೆಳಗ್ಗೆ ರಾಜಧಾನಿಯಲ್ಲಿ ಗುಂಡಿನ ಸದ್ದು! ರೌಡಿ ಕಾಲು ಪಂಕ್ಚರ್

‘ಆಹಾರ ಪದ್ದತಿ ಅವರವರ ಆಯ್ಕೆ, ಇದಕ್ಕೆ ಒತ್ತಡ ಹೇರುವುದು ಸರಿಯಲ್ಲ. ಸರ್ಕಾರ, ಯಾವುದೇ ವ್ಯಕ್ತಿಗಳು ಒತ್ತಡ ತಂದು ಆಹಾರ ಪದ್ದತಿಯನ್ನು ಬದಲಾಯಿಸಲು ಸಾಧ್ಯವಿಲ್ಲ. ಮಕ್ಕಳಿಗೆ ಮೊಟ್ಟೆ ವಿತರಿಸುವುದು ಕೆಲ‌ ಸಮಾಜಕ್ಕೆ ‌ನೋವು ತರುತ್ತೆ ಅಂದರೆ ರಾಜ್ಯ ಸರ್ಕಾರ ಈ ವಿಚಾರವನ್ನು ಮರುಪರಿಶೀಲನೆ ಮಾಡಬೇಕಾಗಿದೆ. ಈ ಬಗ್ಗೆ ಸಿಎಂ‌(Basavaraj Bommai) ಜೊತೆ ಚರ್ಚೆ ನಡೆಸಿ ವಿನಂತಿ ಮಾಡಿಕೊಳ್ಳುತ್ತೇನೆ’ ಅಂತಾ ಅವರು ಹೇಳಿದ್ದಾರೆ.

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಖಂಡನೆ  

ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ(Egg Distribution) ನೀಡುವ ವಿಚಾರಕ್ಕೆ ಸಂಬಂಧಿಸಿ ಕಳೆದ ಕೆಲವು ದಿನಗಳಿಂದ ಪರ-ವಿರೋಧ ಚರ್ಚೆಯಾಗುತ್ತಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆಯ ಭಾಗವಾಗಿ ಸರ್ಕಾರವು ಮಕ್ಕಳಿಗೆ ಮೊಟ್ಟೆ ನೀಡಲು ಮುಂದಾಗಿರುವುದಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ(Vishwaprasanna Teertha Swami) ಖಂಡಿಸಿದ್ದರು. ‘ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ನಮ್ಮ ಪರಂಪರೆಯ ಭಾಗವಾಗಿರುವ ಆಹಾರ ಕ್ರಮವನ್ನು ಬದಲಿಸಬಾರದು. ಮಕ್ಕಳಿಗೆ ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಹಲವರ ನಂಬಿಕೆಗಳಿಗೆ ಧಕ್ಕೆಯುಂಟಾಗುತ್ತದೆ. ಶಾಲೆ ಇರುವುದು ಶಿಕ್ಷಣ ನೀಡಲೆಂದು. ಯಾವುದೇ ಸಮುದಾಯದ ಜೀವನಶೈಲಿಯನ್ನು ಬದಲಿಸಬಾರದು. ಯಾರಿಗೆ ಯಾವುದನ್ನು ಸೇವಿಸಲು ಇಷ್ಟವಿದೆಯೋ ಅದನ್ನು ಸೇವಿಸಲಿ. ಸರ್ಕಾರ ಅದರ ಖರ್ಚು ವಹಿಸಿಕೊಳ್ಳಲಿ’ ಅಂತಾ ಸಲಹೆ ನೀಡಿದ್ದರು.

ಇದನ್ನೂ ಓದಿ: ಸಿಲಿಕಾನ್ ಸಿಟಿಗೆ ‘ಒಮಿಕ್ರಾನ್’ ಆತಂಕ, ಟೆಸ್ಟಿಂಗ್ ಹೆಚ್ಚಿಸಿದ ಬಿಬಿಎಂಪಿ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News