ಮೃತರ ಹೆಸರಿನಲ್ಲಿ Pension, Ration ಪಡೆಯುತ್ತಿರುವವರಿಗೆ ಶಾಕ್ !

ರಾಜ್ಯದಲ್ಲಿ 67 ಲಕ್ಷ ಜನರಿಗೆ ಪಿಂಚಣಿ ವಿತರಣೆ ಆಗುತ್ತಿದ್ದು ಪ್ರತಿ ವರ್ಷ ಏಳೂವರೆ ಸಾವಿರ ಕೋಟಿ ರೂಪಾಯಿ ಖರ್ಚಾಗುತ್ತಿದೆ. 

Written by - Yashaswini V | Last Updated : Jan 21, 2021, 07:50 AM IST
  • ರಾಜ್ಯದಲ್ಲಿ 67 ಲಕ್ಷ ಜನರಿಗೆ ಪಿಂಚಣಿ ವಿತರಣೆ
  • ಇದಕ್ಕಾಗಿ ಸರ್ಕಾರದ ಬೊಕ್ಕಸಕ್ಕೆ ಪ್ರತಿ ವರ್ಷ ಏಳೂವರೆ ಸಾವಿರ ಕೋಟಿ ರೂಪಾಯಿ ವೆಚ್ಚ
  • 67 ಲಕ್ಷ ಜನರ ಪೈಕಿ ಶೇ. 20 ರಷ್ಟು ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ
ಮೃತರ ಹೆಸರಿನಲ್ಲಿ Pension, Ration ಪಡೆಯುತ್ತಿರುವವರಿಗೆ ಶಾಕ್ !

ಬೆಂಗಳೂರು : ಮೃತರ ಹೆಸರಿನಲ್ಲಿ ಪಿಂಚಣಿ ಹಾಗೂ ಪಡಿತರ ಪಡೆಯುತ್ತಿರುವವರ ವಿವರವನ್ನು ಒಂದು ತಿಂಗಳೊಳಗೆ ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಬಂಧಪಟ್ಟ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ರಾಜ್ಯದಲ್ಲಿ ಹಲವೆಡೆ ಮೃತರ ಹೆಸರಿನಲ್ಲಿ ಪೆನ್ಷನ್ ಮತ್ತು ಪಡಿತರ ಹೋಗುತ್ತಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ - 'ಅದಾನಿ, ಅಂಬಾನಿಯಂತಹ ಬಂಡವಾಳಶಾಹಿಗಳಿಗೆ ಈ ಕಾಯಿದೆಗಳನ್ನು ಜಾರಿಗೆ ತಂದಿದೆಯೇ ಹೊರತು ರೈತರಿಗಲ್ಲ'

ಮೃತ ಪಟ್ಟವರ ಹೆಸರಿನಲ್ಲಿ ವಿವಿಧ ಪಿಂಚಣಿಗಳು (Pension) ದುರ್ಬಳಕೆ ಆಗುತ್ತಿರುವ ಪ್ರಕರಣಗಳು ಪತ್ತೆಯಾಗಿವೆ. ಸಂಬಂಧಪಟ್ಟ ಅಧಿಕಾರಿಗಳು ತಿಂಗಳೊಳಗೆ ಇದನ್ನು ತಡೆಹಿಡಿದು ಸೂಕ್ತ ಕ್ರಮ ವಹಿಸುವಂತೆ ಸಿಎಂ ಬಿಎಸ್ ವೈ ಗಡುವು ನೀಡಿದ್ದಾರೆ.

ಇದನ್ನೂ ಓದಿ - BPL ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್!

ಸಾಮಾಜಿಕ ಭದ್ರತಾ ಯೋಜನೆಯಡಿ ಮೃತಪಟ್ಟ ಫಲಾನುಭವಿಗಳಿಗೆ ಪಿಂಚಣಿ ಪಾವತಿಯಾಗುತ್ತಿದೆ ಮತ್ತು ಪಡಿತರ ವಿತರಣೆಯಾಗುತ್ತಿದೆ. ರಾಜ್ಯದಲ್ಲಿ 67 ಲಕ್ಷ ಜನರಿಗೆ ಪಿಂಚಣಿ ವಿತರಣೆ ಆಗುತ್ತಿದ್ದು ಪ್ರತಿ ವರ್ಷ ಏಳೂವರೆ ಸಾವಿರ ಕೋಟಿ ರೂಪಾಯಿ ಖರ್ಚಾಗುತ್ತಿದೆ. 67 ಲಕ್ಷ ಜನರ ಪೈಕಿ ಶೇ. 20 ರಷ್ಟು ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತ ವ್ಯಕ್ತಿಗಳಿಗೆ ಪಾವತಿಯಾಗುತ್ತಿರುವ ಪಿಂಚಣಿ ನಿಲ್ಲಿಸಿದರೆ ಸರ್ಕಾರದ ಬೊಕ್ಕಸಕ್ಕೆ ಅಂದಾಜು 600 ಕೋಟಿ ರೂ. ಉಳಿತಾಯವಾಗಲಿದೆ ಎಂದವರು ಸಭೆಯಲ್ಲಿ ವಿವರಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

More Stories

Trending News