ಬೆಂಗಳೂರು: ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್‌ನಲ್ಲಿ ಉಪಹಾರ ಮತ್ತು ತಿಂಡಿಯ ಬೆಲೆ ಹೆಚ್ಚಿಸಲು ಬಿಬಿಎಂಪಿ ಸಿದ್ಧತೆ ನಡೆಸಿದ್ದು, ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತಾಗಲಿದೆ.


COMMERCIAL BREAK
SCROLL TO CONTINUE READING

ರಾಜ್ಯ ಸರ್ಕಾರ ಕಳೆದ ಒಂದು ವರ್ಷದಿಂದ ಅನುದಾನ ನೀಡದಿರುವ ಹಿನ್ನೆಲೆಯಲ್ಲಿ ಆರ್ಥಿಕ ಹೊರೆ ಕಡಿಮೆ ಮಾಡಿಕೊಳ್ಳಲು ಬಿಬಿಎಂಪಿ ಇಂದಿರಾ ಕ್ಯಾಂಟೀನ್ ತಿಂಡಿ ಮತ್ತು ಊಟದ ಬೆಲೆ ಹೆಚ್ಚಳಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ.


ನೂತನ ಗುತ್ತಿಗೆಯೊಂದಿಗೆ ಹೊಸ ದರವನ್ನು ಜಾರಿಗೆ ತರಲು ಬಿಬಿಎಂಪಿ ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಬೆಳಗಿನ ಉಪಹಾರದ ದರ ₹5 ರಿಂದ ₹10 ಹಾಗೂ ಊಟದ ದರ ₹10 ರಿಂದ ₹15 ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.


ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿ ಬಡ ಜನರ ಹಸಿವು ನೀಡಿಸಲು ನಾಗರಿಕರಿಗೆ ಕಡಿಮೆ ದರದಲ್ಲಿ ತಿಂಡಿ ಮತ್ತು ಊಟ ವಿತರಿಸುವ ಸಲುವಾಗಿ ರಾಜ್ಯಸರ್ಕಾರ ಈ ಯೋಜನೆಯನ್ನು ಜಾರಿಗೆ ತರಲಾಯಿತು.


ಇಂದಿರಾ ಕ್ಯಾಂಟೀನ್ ವೇಳಾಪಟ್ಟಿ:


  • ಬೆಳಗ್ಗೆ 7.30 ರಿಂದ 10.30 ವರೆಗೆ ತಿಂಡಿ ವಿತರಣೆ

  • ಮಧ್ಯಾಹ್ನ 12.30ರಿಂದ 2.30ರವರೆಗೆ ಮಧ್ಯಾಹ್ನದ ಊಟ

  • ರಾತ್ರಿ 7.30 ರಿಂದ 8.30ರವರೆಗೆ ಊಟ ಲಭ್ಯ.