)
ಬೆಂಗಳೂರು: ರಾಜ್ಯದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು
ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಕೆ.ಎಸ್ ನವೀನ್ ಹಾಗೂ ಡಿ.ಎಸ್.ಅರುಣ್ ಅವರುಗಳ ಸೂಚನಾ ಪತ್ರಕ್ಕೆ ಉತ್ತರಿಸಿದ ಸಚಿವರು, ನಮ್ಮ ಸರ್ಕಾರವು 31 ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡಿದ್ದು ಕಟ್ಟಡ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿರುತ್ತದೆ ಎಂದರು.
ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ಆಗದಂತೆ ಪಾರದರ್ಶಕವಾಗಿ ಶಾಲೆಗಳ ನಿರ್ಮಾಣ ಮಾಡಲಾಗುವುದು . ಇದರಿಂದ ಕಾರ್ಮಿಕರ ಮಕ್ಕಳಿಗೆ ಶಿಕ್ಷಣದ ಜೊತೆಗೆ ವಸತಿನಿಲಯದ ಅನುಕೂಲವು ಸಿಗಲಿದೆ ಎಂದರು.
ವರದಿ: ಪ್ರಶೋಬ್ ದೇವನಹಳ್ಳಿ