ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯ ಅತ್ಯುತ್ತಮವಾಗಿದೆ. ಅವರನ್ನು ವೈದ್ಯರು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ, ನಡೆದಾಡುವ ದೇವರು ಎಂದೇ ಹೆಸರಾಗಿರುವ ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಶ್ರೀಗಳಿಗೆ ಚಿಕಿತ್ಸೆ ಕೊಡುವುದು ವೈದ್ಯರಿಗೆ ಸವಾಲಿನ ವಿಷಯ. ಆದರೆ, ಶ್ರೀಗಳು ಇಳಿ ವಯಸ್ಸಿನಲ್ಲಿಯೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ‌. ಶ್ರೀಗಳನ್ನು ನೋಡಿಕೊಳ್ಳುತ್ತಿರುವ ವೈದ್ಯರು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.



ಮುಂದುವರೆದು ಮಾತನಾಡಿದ ಅವರು, ಧಾರವಾಡ ಸಾಹಿತ್ಯ ಸಮ್ಮೇಳನಕ್ಕೆ ತೆರಳುವ ಮಾರ್ಗ ಮಧ್ಯೆ ಶ್ರೀಗಳ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದು ತೆರಳೋಣ ಅಂತ ಬಂದಿದ್ದೇನೆ ಎಂದರು. ಸ್ವಾಮೀಜಿಯವರು ಆರೋಗ್ಯವಾಗಿದ್ದು, ಯಾವುದೇ ಆತಂಕ‌ಬೇಡ ಎಂದು ತಿಳಿಸಿದರು.