ಶ್ರೀಗಳು ಬಡತನ, ಹಸಿವು, ಸಾಮಾಜಿಕ ಅನ್ಯಾಯಗಳ ನಿರ್ಮೂಲನೆಗೆ ಬದುಕನ್ನೇ ಮುಡಿಪಾಗಿಟ್ಟಿದ್ದರು: ಪ್ರಧಾನಿ ಮೋದಿ

ಬಡತನ, ಹಸಿವು, ಸಾಮಾಜಿಕ ಅನ್ಯಾಯಗಳಂತಹ ಪಿಡುಗುಗಳನ್ನು ನಿರ್ಮೂಲನ ಮಾಡಲು ಶ್ರೀಗಳು ತಮ್ಮ ಬದುಕನ್ನು ಮುಡಿಪಾಗಿಟ್ಟಿದ್ದರು ಎಂದು ಟ್ವೀಟ್​ ಮೂಲಕ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

Last Updated : Jan 21, 2019, 03:49 PM IST
ಶ್ರೀಗಳು ಬಡತನ, ಹಸಿವು, ಸಾಮಾಜಿಕ ಅನ್ಯಾಯಗಳ ನಿರ್ಮೂಲನೆಗೆ ಬದುಕನ್ನೇ ಮುಡಿಪಾಗಿಟ್ಟಿದ್ದರು: ಪ್ರಧಾನಿ ಮೋದಿ title=
ಸಂಗ್ರಹ ಚಿತ್ರ

ಬೆಂಗಳೂರು: ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. 

ಶ್ರೀ ಶಿವಕುಮಾರ ಸ್ವಾಮಿಗಳು ಜನರಿಗೋಸ್ಕರ ಅದರಲ್ಲೂ ವಿಶೇಷವಾಗಿ ಬಡವರು ಮತ್ತು ನಿರ್ಗತಿಕರಿಗಾಗಿ ಬದುಕಿದವರು. ಬಡತನ, ಹಸಿವು, ಸಾಮಾಜಿಕ ಅನ್ಯಾಯಗಳಂತಹ ಪಿಡುಗುಗಳನ್ನು ನಿರ್ಮೂಲನ ಮಾಡಲು ಶ್ರೀಗಳು ತಮ್ಮ ಬದುಕನ್ನು ಮುಡಿಪಾಗಿಟ್ಟಿದ್ದರು ಎಂದು ಟ್ವೀಟ್​ ಮೂಲಕ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಶ್ರೀಗಳು ಉತ್ತಮ ಆರೋಗ್ಯ ಮತ್ತು ಶಿಕ್ಷಣ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಮುಂಚೂಣಿಯಲ್ಲಿದ್ದರು. ನಮ್ಮ ಸಂಪ್ರದಾಯಗಳಾದ ಸಹಾನುಭೂತಿ ಸೇವೆ, ಆಧ್ಯಾತ್ಮಿಕ ಸಂಪ್ರದಾಯಗಳನ್ನು ಪ್ರತಿನಿಧಿಸುತ್ತಾ ದುರ್ಬಲರ ಹಕ್ಕುಗಳನ್ನು ರಕ್ಷಿಸುತ್ತಿದ್ದರು.  ಅಂತಹ ಮಹಾನ್ ಗುರುಗಳ ಆಶೀರ್ವಾದವನ್ನು ನಾನು ಪಡೆದಿದ್ದೇನೆ. ಅವರಿಂದ ಸಮುದಾಯದ ಮತ್ತು ಸಮಾಜದ ಪ್ರಗತಿಯಲ್ಲಿ ಅವರ ಪಾಲು ಬಹಳಷ್ಟಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನಾಳೆ ತುಮಕೂರಿಗೆ ಪ್ರಧಾನಿ ಮೋದಿ
ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಜ.22) ತುಮಕೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.  ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರೂ ಸಹ ಶ್ರೀಗಳ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. 

Trending News