Karnataka Cabinet List: ʼಶೆಟ್ಟರ್ ಹಾಗೂ ಸವದಿಗೆ ಅವಕಾಶ ಮಾಡಿಕೊಡೋದು ಪಕ್ಷಕ್ಕೆ ಒಳ್ಳೆದುʼ
Karnataka Cabinet List: ರಾಜಭವನದಲ್ಲಿ ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ ಮಾಡಲಾಯಿತ್ತು. ನೂತನ ಸಚಿವರ ಆಯ್ಕೆ ಕುರಿತು ಹುಬ್ಬಳ್ಳಿಯಲ್ಲಿ ಮೂರು ಸಾವಿರ ಮಠದ ಗುರು ಸಿದ್ದರಾಜಯೋಗಿಂದ್ರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ: ರಾಜಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ , ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಸೇರಿದಂತೆ ಹಲವು ಗಣ್ಯರ ಸಮುಖದಲ್ಲಿ ಇಂದು ಶನಿವಾರ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಸಂಭ್ರಮಿಸಿದರೇ, ಇನ್ನು ಕೆಲವರು ನಡುವೆ ಸಚಿವ ಸ್ಥಾನ ಕೈ ತಪ್ಪಿದ್ದವರು ಪರಿತಪ್ಪಿಸುತ್ತಿದ್ದಾರೆ. ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ತಪ್ಪಿದ್ದ ಹಿನ್ನಲೆ, ಹುಬ್ಬಳ್ಳಿಯಲ್ಲಿ ಮೂರು ಸಾವಿರ ಮಠದ ಗುರು ಸಿದ್ದರಾಜಯೋಗಿಂದ್ರ ಸ್ವಾಮೀಜಿಯವರು ಶೆಟ್ಟರ್ ಹಾಗೂ ಸವದಿ ಒಳ್ಳೆ ಅನುಭವಿ ರಾಜಕಾರಣಿಗಳು.ಸಜ್ಜನ,ಸಾತ್ವಿಕ ರಾಜಕಾರಣಿಗಳು,ಅವರಿಗೆ ಸಚಿವ ಸ್ಥಾನ ಕೊಡಬೇಕಿತ್ತು ಹಾಗೂ ಅವರ ಅನುಭವವನ್ನು ಪಕ್ಷ ಬಳಸಿಕೊಳ್ಳಬೇಕು ಬೇಸರ ವ್ಯಕ್ತ ಪಡಿಸಿದ್ದಾರೆ.
ಇದನ್ನೂ ಓದಿ: ಸಚಿವ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಎತ್ತಿ ಹಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಈ ಬಾರಿ ಸಚಿವರ ಆಯ್ಕೆಯಲ್ಲಿ ಲಿಂಗಾಯತರನ್ನು ಕಡೆಗಣಿಸಿದ ಹಾಗೆ ಕಾಣಲ್ಲ. ಇನ್ನು ಅವಕಾಶ ಇದೆ,ಶೆಟ್ಟರ್ ಹಾಗೂ ಸವದಿಗೆ ಅವಕಾಶ ಮಾಡಿಕೊಡೋದು ಪಕ್ಷಕ್ಕೆ ಒಳ್ಳೆದೆಂದು ಕಾಂಗ್ರೆಸ್ ಸರ್ಕಾರಕ್ಕೆ ಅಗ್ರಯಿಸಿದ್ದಾರೆ. ಇನ್ನುಳಿದಂತೆ ಗ್ಯಾರಂಟಿಗಳ ಬಗ್ಗೆ ಮಾತಾನಾಡಿದ ಸ್ವಾಮೀಜಿ, ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡೇ ಮಾಡತ್ತೆ.
ಇದನ್ನೂ ಓದಿ: ರೋಡ್ ಶೋ ಮಾಡಿದ ಪ್ರಧಾನಿ ಮೋದಿಯವರು ರಾಜೀನಾಮೆ ನೀಡುವರೇ?: ಕಾಂಗ್ರೆಸ್
ಅದಕ್ಕೆ ಅದರದೇ ಆದ ನೀತಿ ಇರತ್ತೆ ಆದಾದ ಬಳಿಕ ಗ್ಯಾರಂಟಿ ಜಾರಿಯಾಗುತ್ತೆಂದು ಸಿದ್ದರಾಜಯೋಗಿಂದ್ರ ಸ್ವಾಮೀಜಿ ಮಾಧ್ಯಮದ ಮುಂದೆ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ನೂತನ ಸಚಿವರಾಗಿ ಪ್ರಮಾಣ ಸಮಾರಂಭದಲ್ಲಿ ಈಶ್ವರ್ ಖಂಡ್ರೆ, ಲಕ್ಷ್ಮಿ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಶರಣಬಸಪ್ಪ ದರ್ಶನಾಪುರ , ಡಾ.ಎಚ್.ಸಿ ಮಹದೇವಪ್ಪ, ಕೆ.ವೆಂಕಟೇಶ್, ಎಸ್.ಎಸ್. ಮಲ್ಲಿಕಾರ್ಜುನ್, ಭೈರತಿ ಸುರೇಶ್, ಕೃಷ್ಣ ಬೈರೇಗೌಡ , ರಹೀಂ ಖಾನ್, ಮಧು ಬಂಗಾರಪ್ಪ ಸೇರಿದಂತೆ ಅನೇಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡ