ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ನಾಳೆಯಿಂದ ಕಠಿಣ ಕ್ರಮಗಳನ್ನು ಜಾರಿಗೆ ತರುವುದಾಗಿ ಸರ್ಕಾರ ಹೇಳಿರುವುದರಿಂದ ಈಗಾಗಲೇ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ದುಡಿಯುವ ವರ್ಗಕ್ಕೆ ನೆರವಾಗುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

* ಕೊರೊನಾ ರೋಗಕ್ಕಿಂತ ಹೆಚ್ಚಾಗಿ ಇಲ್ಲಿನ ರೋಗಗ್ರಸ್ತ ರಾಜ್ಯ ಸರ್ಕಾರದಿಂದ ರಾಜ್ಯದ ಜನತೆ ಬವಣೆ ಪಡುವಂತಾಗಿದೆ. ಸೋಮವಾರದಿಂದ ಜಾರಿಗೆ ಬರಲಿರುವ ಲಾಕ್‌ಡೌನ್ ಗೊಂದಲದ ಗೂಡಾಗಿದ್ದು ಗ್ರಾಮೀಣ ಪ್ರದೇಶದ ಜನತೆ ಇದರ ವಿರುದ್ಧ ದಂಗೆ ಎದ್ದರೂ ಆಶ್ಚರ್ಯ ಇಲ್ಲ.


ಇದನ್ನೂ ಓದಿ: Maharashtra: ಕೊರೊನಾದಿಂದ ಚೇತರಿಸಿಕೊಂಡು Mucormycosis ನಿಂದ ಪ್ರಾಣ ಕಳೆದುಕೊಂಡ 8 ಜನ


* ಪರಿಷ್ಕೃತ ಲಾಕ್‌ಡೌನ್ ಅನ್ವಯ ಬೆಳಿಗ್ಗೆ ಆರರಿಂದ ಹತ್ತರ ವರೆಗೆ ದಿನಸಿ, ತರಕಾರಿ, ಮೀನು-ಮಾಂಸದ ಅಂಗಡಿಗಳು ತೆರೆಯಲು ಅವಕಾಶ ನೀಡಿ ಈ ಅವಧಿಯಲ್ಲಿ ವಾಹನ ಸಂಚಾರ ಮಾತ್ರ ನಿಷೇಧಿಸಿರುವುದು ಬಿಜೆಪಿ ಸರ್ಕಾರದ ಮೂರ್ಖತನದ ನಿರ್ಧಾರ.
ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ-ಮುಂಗಟ್ಟುಗಳು 2-3 ಕಿ.ಮೀ.ದೂರದಲ್ಲಿವೆ. ಅಲ್ಲಿಂದ ಮನೆ ಸಾಮಾನುಗಳನ್ನು ಹಿರಿಯರು, ಅಶಕ್ತರು ಹೊತ್ತುಕೊಂಡು ಬರಬೇಕೇ ಮುಖ್ಯಮಂತ್ರಿಗಳೇ? ಆಯಾಸ-ಪ್ರಯಾಸದಿಂದ  ಅವರಿಗೇನಾದರೂ ಆಗಿಬಿಟ್ಟರೆ ಯಾರು ಹೊಣೆ? ಈ ಸಾಮಾನ್ಯ ಜ್ಞಾನವೂ ಆಡಳಿತ ನಡೆಸುವವರಿಗೆ ಬೇಡವೇ?


ಆಮ್ಲಜನಕ ಸರಬರಾಜಿಗೆ ಕರ್ನಾಟಕ ಅಡ್ಡಿಯಾಗಿದೆ ಎಂದ ಮಹಾರಾಷ್ಟ್ರ ಸಚಿವ ..!


* ಹೊಸ ಲಾಕ್ ಡೌನ್ ಜಾರಿಗೆ ತರಲು ಹೊರಟಿರುವ ರಾಜ್ಯದ ಆಡಳಿತಗಾರರು ಮತ್ತು ಅಧಿಕಾರಿಗಳು ಮೊದಲು ಬೆಂಗಳೂರಿನ ಹವಾನಿಯಂತ್ರಿತ ಕಚೇರಿಯಿಂದಹೊರಬಂದು ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವ ಸ್ಥಿತಿಯನ್ನು ಅರಿಯಲಿ.


* ಕೊರೊನಾ (COVID-19) ನಿಯಂತ್ರಿಸಲು ಲಾಕ್ ಡೌನ್ ಅನಿವಾರ್ಯ ಆಗಿರುವುದು ನಿಜ. ಆದರೆ ಮುಖ್ಯಮಂತ್ರಿಗಳು ಏಕಪಕ್ಷೀಯ ನಿರ್ಧಾರ ಕೈಗೊಳ್ಳದೆ ಜಿಲ್ಲಾಧಿಕಾರಿಗಳಿಂದ  ವಾಸ್ತವ ಸ್ಥಿತಿಯ ವರದಿ ಪಡೆಯಬೇಕಾಗಿತ್ತು. ಇದರಿಂದ ಪೊಲೀಸರು ಮತ್ತು ಜನತೆಯ ನಡುವಿನ‌ ಸಂಘರ್ಷವನ್ನು ತಪ್ಪಿಸಿದಂತಾಗುತ್ತಿತ್ತು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.